ಚಿಕ್ಕಬಳ್ಳಾಪುರ: ತಂಗಿ ಮೇಲಿನ ಸೇಡಿಗೆ ಆಕೆಯ ಮಗುವನ್ನೇ ಕೊಂದಿರುವ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ಮುತ್ತಕದಹಳ್ಳಿಯಲ್ಲಿ ನಡೆದಿದೆ. ಅಂಬಿಕಾ ಎಂಬಾಕೆ ಕೊಲೆ ಪಾತಕಿಯಾಗಿದ್ದಾಳೆ. ಅಂಬಿಕಾಳ ಸಿಟ್ಟಿಗೆ ಮುಗ್ದ ಮಗುವೊಂದು ಪ್ರಾಣ ಬಿಟ್ಟಿದೆ. ಅಂಬಿಕಾ ಹಾಗೂ ಅನಿತಾ ಇಬ್ಬರು ಅಕ್ಕ ತಂಗಿಯರು. ತಂಗಿ ಅನಿತಾ ಮೇಲಿನ ಕೋಪಕ್ಕೆ ಆಕೆಯ ಮಗನನ್ನು ಕೊಲೆ ಮಾಡಿ ಹೂತು ಹಾಕಿದ್ದಾಳೆ.
ಹಸುಗೂಸು ಮಕ್ಕಳ ಮಾರಾಟ ಕೇಸ್: ತರಕಾರಿ ಮಾರುತ್ತಿದ್ದವಳು ಕೋಟ್ಯಾಧಿಪತಿಯಾಗಿದ್ದೇ ರೋಚಕ!
ಅಂಬಿಕಾಳ ಅನೈತಿಕ ಸಂಬಂಧಗಳಿಗೆ ತಂಗಿ ಅನಿತಾ ಅಡ್ಡಿಯಾಗುತ್ತಿದ್ದಳು ಎನ್ನಲಾಗಿದೆ. ಇದರಿಂದ ಸಿಟ್ಟಿಗೆದ್ದ ಅಂಬಿಕಾ, ತಂಗಿ ಮೇಲಿನ ಕೋಪಕ್ಕೆ ಆಕೆ ಮಗನನ್ನು ಕೊಲೆ ಮಾಡಿದ್ದಾಳೆ. ಸ್ಥಳಕ್ಕೆ ಪೆರೆಸಂದ್ರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹ ವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆಯನ್ನು ಮುಂದುವರಿಸಿದ್ದಾರೆ.