ವಿಜಯಪುರ: ಕಲಬುರಗಿ ಜಿಲ್ಲೆಯ ಆಳಂದ ಕಾಂಗ್ರೆಸ್ ಶಾಸಕ ಬಿ. ಆರ್. ಪಾಟೀಲ ಅವರು ತಮ್ಮ ವಿರುದ್ಧ ಬರೆದಿರುವ ಪತ್ರದ ಕುರಿತು ಮುಖ್ಯಮಂತ್ರಿಗಳೇ ತೀರ್ಮಾನ ಕೈಗೊಳ್ಳುತ್ತಾರೆ ಎಂದು ಕಂದಾಯ ಸಚಿವ ಕೃಷ್ಠ ಭೈರೇಗೌಡ ತಿಳಿಸಿದ್ದಾರೆ. ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಶಾಸಕ ಬಿ. ಆರ್. ಪಾಟೀಲ ಅವರು ಮುಖ್ಯಮಂತ್ರಿಗೆ ಪತ್ರ ಬರೆದ ವಿಚಾರ ಕುರಿತು ತೀಕ್ಷ್ಣವಾಗಿ ಪ್ರತಿಕ್ರಿಯೆ ನೀಡಿದರು.
ಶಾಸಕರು ಸಿಎಂಗೆ ಪತ್ರ ಬರೆದಿದ್ದಾರೆ. ಈ ಪತ್ರದ ಬಗ್ಗೆ ಮುಖ್ಯಮಂತ್ರಿಗಳು ತೀರ್ಮಾನ ತೆಗೆದುಕೊಳ್ಳುತ್ತಾರೆ. ನಾನು ಸದನದಲ್ಲಿ ಏನು ಉತ್ತರ ಕೊಟ್ಟಿದ್ದೇನೆ ಎಂಬುದರ ಕುರಿತು ಮಾಹಿತಿಯನ್ನು ಮಾಧ್ಯಮದವರಿಗೆ ನೀಡುತ್ತೇನೆ. ಅದರಲ್ಲಿ ಏನು ಹೇಳಿದ್ದೀವಿ? ಏನು ಬಿಟ್ಟಿದೀವಿ ಎಂಬುದನ್ನು ನೀವೇ ತೀರ್ಮಾನ ಮಾಡಬಹುದು. ಅಂತಿಮವಾಗಿ ಅದರ ಬಗ್ಗೆ ಮುಖ್ಯಮಂತ್ರಿಗಳು ತೀರ್ಮಾನ ತೆಗೆದುಕೊಳ್ಳುತ್ತಾರೆ ಎಂದು ಅವರು ಹೇಳಿದರು.
MS Dhoni News car: 3.30 ಕೋಟಿಯ ಕಾರು ಖರೀದಿಸಿದ MS ಧೋನಿ: ಸೋಶಿಯಲ್ ಮೀಡಿಯಾದಲ್ಲಿ ಫುಲ್ ವೈರಲ್!
ರಾಜ್ಯದಲ್ಲಿ ಉಂಟಾಗಿರುವ ಬರ ಹಾಗೂ ಜನರ ಸಮಸ್ಯೆಗಳನ್ನು ಪ್ರತಿಯೊಂದು ಜಿಲ್ಲೆಗೆ ಹೋಗಿ ಅಲ್ಲಿಯೇ ಪರಿಹಾರ ಒದಗಿಸಬೇಕು ಎಂಬ ಉದ್ದೇಶದಿಂದ ವಿಜಯಪುರ ಜಿಲ್ಲೆಗೆ ಬಂದಿದ್ದೇನೆ. ಜನಗಳ ವಿಷಯವಿದ್ದರೆ ನಾನು ತಮ್ಮ ಜೊತೆ ಚರ್ಚಿಸುತ್ತೇನೆ. ಬೇರೆ ಅದು, ಇದು ಎಂದು ಹೇಳಿ, ನಾನು ಯಾವುದೇ ಕಾಂಟ್ರೋವರ್ಸಿ ಕ್ರಿಯೆಟ್ ಮಾಡಲು ನಾನು ಇಲ್ಲಿಗೆ ಬಂದಿಲ್ಲ’ ಕೃಷ್ಣ ಭೈರೇಗೌಡ ತಿಳಿಸಿದರು.