ಬೆಂಗಳೂರು:- ರಾಜಧಾನಿ ಬೆಂಗಳೂರಿನ ಶಾಲೆಗಳಿಗೆ ಬಾಂಬ್ ಬೆದರಿಕೆ ಮೇಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಅವರು ತನಿಖೆಗೆ ಸೂಚಿಸಿದ್ದಾರೆ.
ನಗರದ ಶಾಲೆಗಳಿಗೆ ಇ-ಮೇಲ್ ಮುಖಾಂತರ ಬಾಂಬ್ ಬೆದರಿಕೆ ಸಂದೇಶ ಬಂದಿದೆ. ಈ ಕುರಿತು ತನಿಖೆ ನಡೆಸುವಂತೆ ಪೊಲೀಸ್ ಇಲಾಖೆಗೆ ಸೂಚನೆ ನೀಡಿದ್ದೇನೆ ಎಂದರು.
ಎಲ್ಲಿಂದ ಸಂದೇಶ ಬಂದಿದೆ ಎಂಬುದರ ಕುರಿತು ತನಿಖೆ ನಡೆಸುವಂತೆ ಸೂಚಿಸಿದ್ದೇನೆ. ಎಲ್ಲಾ ಶಾಲೆಗಳಿಗೂ ಭದ್ರತೆ ಕೊಡಲು ಸೂಚನೆ ನೀಡಿದ್ದೇನೆ ಎಂದರು.