ಮೈಸೂರು: ಮೈಸೂರು ತಾಲೂಕಿನ ಜಯಪುರ ಹೋಬಳಿ ಸಿಂಧುವಳ್ಳಿ, ಬ್ಯಾತಹಳ್ಳಿ, ಚಿಕ್ಕಕಾನ್ಯ, ದೊಡ್ಡಕಾನ್ಯ ಗ್ರಾಮಗಳಲ್ಲಿ ಹುಲಿ ಕಾಣಿಸಿಕೊಂಡಿದೆ. ಹುಲಿ ಚಲನವಲನದ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಹುಲಿ ಸೆರೆಗಾಗಿ ಅರಣ್ಯ ಇಲಾಖೆಯಿಂದ ಬೋನ್ ಅಳವಡಿಸಿದೆ.
MS Dhoni News car: 3.30 ಕೋಟಿಯ ಕಾರು ಖರೀದಿಸಿದ MS ಧೋನಿ: ಸೋಶಿಯಲ್ ಮೀಡಿಯಾದಲ್ಲಿ ಫುಲ್ ವೈರಲ್!
ಸ್ಥಳಕ್ಕೆ ಶಾಸಕ ಜಿ.ಟಿ.ದೇವೇಗೌಡ ಭೇಟಿ ನೀಡಿ, ಅರಣ್ಯ ಇಲಾಖೆ ಅಧಿಕಾರಿಗಳ ಬಳಿ ಮಾಹಿತಿ ಪಡೆದುಕೊಂಡರು. ಸೂಕ್ತ ಕಾರ್ಯಚರಣೆ ಮೂಲಕ ಹುಲಿ ಸೆರೆಹಿಡಿಯುವಂತೆ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಶಾಸಕ ಜಿ.ಟಿ ದೇವೇಗೌಡ ಸೂಚನೆ ನೀಡಿದರು. ಅಲ್ಲದೆ ಗ್ರಾಮಸ್ಥರು ರಾತ್ರಿ ವೇಳೆಯಲ್ಲಿ ಅನವಶ್ಯಕವಾಗಿ ಓಡಾಡದಂತೆ ಮನವಿ ಮಾಡಿದರು. ಹುಲಿ ಕಾರ್ಯಚರಣೆ ಮುಗಿಯುವವರೆಗೆ ಜನರು ಸಹಕರಿಸುವಂತೆ ವಿನಂತಿಸಿಕೊಂಡರು.