ಕೋಲ್ಕತಾ: ಓಲೈಕೆ, ಒಳನುಸುಳುವಿಕೆ, ಭ್ರಷ್ಟಾಚಾರ ಮತ್ತು ರಾಜಕೀಯ ಹಿಂಸಾಚಾರ ವಿಚಾರಗಳ ಕುರಿತು ಬಂಗಾಳ ಸಿಎಂ ಹಾಗೂ ಟಿಎಂಸಿ ನಾಯಕಿ ಮಮತಾ ಬ್ಯಾನರ್ಜಿ ಅವರ ವಿರುದ್ಧ ಅಮಿತ್ ಶಾ ವಾಗ್ದಾಳಿ ನಡೆಸಿದರು. ರಾಜ್ಯದಲ್ಲಿನ ಟಿಎಂಸಿ ಸರ್ಕಾರವನ್ನು ಕಿತ್ತು ಹಾಕಬೇಕು ಮತ್ತು ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಯನ್ನು ಅಧಿಕಾರಕ್ಕೆ ತರಬೇಕು ಎಂದು ಜನರಿಗೆ ಮನವಿ ಮಾಡಿದರು.
ಸಭೆಯಲ್ಲಿ ಅಪಾರ ಸಂಖ್ಯೆಯನ್ನು ಜನರು ಸೇರಿರುವುದನ್ನು ಶ್ಲಾಘಿಸಿದ ಅಮಿತ್ ಶಾ, ಇದು ಜನರ ಭಾವನೆಯನ್ನು ಸೂಚಿಸುತ್ತದೆ. 2026ರ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಮೂರನೇ ಎರಡರಷ್ಟು ಬಹುಮತ ಪಡೆದು ರಾಜ್ಯದಲ್ಲಿ ಅಧಿಕಾರ ಪಡೆಯಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
MS Dhoni News car: 3.30 ಕೋಟಿಯ ಕಾರು ಖರೀದಿಸಿದ MS ಧೋನಿ: ಸೋಶಿಯಲ್ ಮೀಡಿಯಾದಲ್ಲಿ ಫುಲ್ ವೈರಲ್!
“ಬಂಗಾಳವು ಒಳನುಸುಳುವಿಕೆ, ಓಲೈಕೆ, ರಾಜಕೀಯ ಹಿಂಸಾಚಾರ ಮತ್ತು ಭ್ರಷ್ಟಾಚಾರದಿಂದ ನಲುಗುತ್ತಿದೆ. ಇಡೀ ದೇಶದಲ್ಲಿ ಚುನಾವಣೆ ಸಂಬಂಧಿ ಹಿಂಸಾಚಾರವು ಅತ್ಯಧಿಕವಾಗಿರುವುದು ಬಂಗಾಳದಲ್ಲಿ. ಪಶ್ಚಿಮ ಬಂಗಾಳದಲ್ಲಿ 212 ಬಿಜೆಪಿ ಕಾರ್ಯಕರ್ತರನ್ನು ಕೊಲ್ಲಲಾಗಿದೆ. 2026ರ ವಿಧಾನಸಭೆ ಚುನಾವಣೆಯಲ್ಲಿ ಜನರು ತಮ್ಮ ಮತಗಳ ಮೂಲಕ ಈ ಕೊಲೆಗಳಿಗೆ ನ್ಯಾಯ ಕೇಳಲಿದ್ದಾರೆ” ಎಂದು ಅಮಿತ್ ಶಾ ಹೇಳಿದರು.