ಮಾಸ್ಕೋ: ರಷ್ಯಾದ (Russia) ಮಹಿಳೆಯರು 8 ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿರಿ ಎಂದು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ (Vladimir Putin) ಕರೆ ನೀಡಿದ್ದಾರೆ. ಮಾಸ್ಕೋದಲ್ಲಿ ನಡೆದ ವಿಶ್ವ ರಷ್ಯಾದ ಪೀಪಲ್ಸ್ ಕೌನ್ಸಿಲ್ ಉದ್ದೇಶಿಸಿ ಮಾತನಾಡಿದ ಪುಟಿನ್, ಮುಂಬರುವ ದಶಕಗಳಲ್ಲಿ ರಷ್ಯಾದ ಜನಸಂಖ್ಯೆ ಹೆಚ್ಚಿಸುವುದು ನಮ್ಮ ಗುರಿ ಎಂದು ಹೇಳಿದ್ದಾರೆ. ರಷ್ಯಾದ ಜನನ ಪ್ರಮಾಣವು 1990 ರ ದಶಕದಿಂದ ಕುಸಿಯುತ್ತಿದೆ. ಕಳೆದ ವರ್ಷ ಫೆಬ್ರವರಿಯಲ್ಲಿ ಉಕ್ರೇನ್ ಯುದ್ಧ ಪ್ರಾರಂಭವಾದಾಗಿನಿಂದ ದೇಶದಲ್ಲಿ 3,00,000 ಕ್ಕೂ ಹೆಚ್ಚು ಸಾವು-ನೋವುಗಳಾಗಿವೆ ಎಂದು ದಿ ಇಂಡಿಪೆಂಡೆಂಟ್ ವರದಿ ತಿಳಿಸಿದೆ.
MS Dhoni News car: 3.30 ಕೋಟಿಯ ಕಾರು ಖರೀದಿಸಿದ MS ಧೋನಿ: ಸೋಶಿಯಲ್ ಮೀಡಿಯಾದಲ್ಲಿ ಫುಲ್ ವೈರಲ್!
ದೇಶದ ಅನೇಕ ಜನಾಂಗದವರು ನಾಲ್ಕು ಅಥವಾ ಐದಕ್ಕಿಂತ ಹೆಚ್ಚಿನ ಮಕ್ಕಳಿದ್ದ ಸುಭದ್ರ ಕುಟುಂಬ ವ್ಯವಸ್ಥೆ ಹೊಂದಿದ್ದರು. ನಮ್ಮ ಅಜ್ಜಿ, ಮುತ್ತಜ್ಜಿಯರು 7, 8 ಮತ್ತು ಅದಕ್ಕಿಂತ ಹೆಚ್ಚಿನ ಮಕ್ಕಳನ್ನು ಹೊಂದಿದ್ದರು ಎಂಬುದನ್ನು ಈ ಸಂದರ್ಭದಲ್ಲಿ ನಾವು ನೆನೆಯಬೇಕು ಎಂದು ಪುಟಿನ್ ತಿಳಿಸಿದ್ದಾರೆ. ನಾವು ಈ ಅತ್ಯುತ್ತಮ ಸಂಪ್ರದಾಯಗಳನ್ನು ಸಂರಕ್ಷಿಸೋಣ, ಪುನರುಜ್ಜೀವನಗೊಳಿಸೋಣ. ದೊಡ್ಡ ಕುಟುಂಬಗಳು ರೂಢಿಯಾಗಬೇಕು. ಎಲ್ಲಾ ರಷ್ಯಾದ ಜನರಿಗೆ ಇದು ಜೀವನ ವಿಧಾನವಾಗಿದೆ. ಕುಟುಂಬವು ರಾಜ್ಯ ಮತ್ತು ಸಮಾಜದ ಅಡಿಪಾಯವಲ್ಲ. ಇದು ಆಧ್ಯಾತ್ಮಿಕ ವಿದ್ಯಮಾನವಾಗಿದೆ. ನೈತಿಕತೆಯ ಮೂಲವಾಗಿದೆ ಎಂದಿದ್ದಾರೆ.