ಧಾರವಾಡ:- ಜಿಲ್ಲೆಯಲ್ಲಿ ಖಾಸಗಿ ಬಸ್ಗೆ ಲಾರಿ ಡಿಕ್ಕಿ ಹೊಡೆದು ಭಾರೀ ದೂರಂತವೊಂದು ತಪ್ಪಿದ ಘಟನೆ ಧಾರವಾಡದಲ್ಲಿ ನಡೆದಿದೆ. ಪ್ರಯಾಣಿಕರನ್ನು ತುಂಬಿಕೊಂಡ ಹೋಗುತ್ತಿದ್ದ ಸಾರಿಗೆ ಬಸ್ಗೆ ಹಿಂಬದಿಯಿಂದ ಲಾರಿ ಡಿಕ್ಕಿ ಹೊಡೆದಿದೆ. ಘಟನೆ ಪರಿಣಾಮ ಇಬ್ಬರು ಪ್ರಯಾಣಿಕರಿಗೆ ಗಾಯವಾಗಿದ್ದು, ಹುಬ್ಬಳ್ಳಿ ಧಾರವಾಡ ರಸ್ತೆಯ ಎಸ್ಡಿಎಂ ಆಸ್ಪತ್ರೆ ಬಳಿ ನಡೆದ ಘಟನೆ ಜರುಗಿದೆ.
ಓರ್ವ ಪುರುಷ ಹಾಗೂ ಓರ್ವ ಮಹಿಳಾ ಪ್ರಾಣಿಕರಿಗೆ ಗಾಯವಾಗಿದ್ದು, ಸ್ಥಳೀಯರ ಮಾಹಿತಿ ಮೇರೆಗೆ ಸ್ಥಳಕ್ಲೆ ಧಾರವಾಡ ಸಂಚಾರಿ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ರವಾನಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಧಾರವಾಡ ಸಂಚಾರಿ ಠಾಣಾ ವ್ಯಾಪ್ತಿಯಲ್ಲಿ ಘಟನೆ ಜರುಗಿದೆ.
ಖಾಸಗಿ ಚಾಲಕನ ಸಮಯ ಪ್ರಜ್ಞೆಯಿಂದ ತಪ್ಪಿದ ಬಾರಿ ದುರಂತ ಸಂಭವಿಸಿದೆ. ಹಿಂದಿಯಿಂದ ಲಾರಿ ಡಿಕ್ಕಿ ಬಳಿಕ ಸಿಗ್ನಲ್ ಕಂಬಕ್ಕೆ ಖಾಸಗಿ ಬಸ್ ಡಿಕ್ಕಿ ಹೊಡೆದಿದೆ. 20 ಅಧಿಕ ಪ್ರಯಾಣಿಕರನ್ನು ಕರೆದುಕೊಂಡು ಈ ಖಾಸಗಿ ಸಾರಿಗೆ ಬಸ್ ಹೋಗುತ್ತಿತ್ತು ಎನ್ನಲಾಗಿದೆ. ಅದೃಷ್ಟವಶಾತ್ ಯಾವುದೇ ಒ್ರಾಣ ಹಾನಿ ಸಂಭವಿಸಿಲ್ಲ ಎಂದು ತಿಳಿದು ಬಂದಿದೆ.