ಬೆಂಗಳೂರು:- ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಭಾರತೀಯ ವಿಜ್ಞಾನ ಸಂಸ್ಥೆಯ ಪಿಎಚ್ಡಿ ಓದುತ್ತಿದ್ದ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜರುಗಿದೆ.
ಡೈಮೊಂಡ್ ಖುಷ್ವಾ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ. ಮೃತದೇಹವನ್ನು ಎಂಎಸ್ ರಾಮಯ್ಯ ಆಸ್ಪತ್ರೆಗೆ ರವಾನಿಸಲಾಗಿದೆ. ಸದಾಶಿವನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಇನ್ನೂ, ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ.
ಈ ಸಂಬಂಧ ಐಐಎಸ್ಸಿ ಪ್ರಕಟನೆ ಹೊರಡಿಸಿ, ಕ್ಯಾಂಪಸ್ ಎಲ್ಲರಿಗೂ ಸುರಕ್ಷಿತ ಸ್ಥಳವಾಗಿದೆ. ಎಲ್ಲ ವಿದ್ಯಾರ್ಥಿಗಳು, ಅಧ್ಯಾಪಕರು ಮತ್ತು ಸಿಬ್ಬಂದಿ ತಕ್ಷಣವೇ ತಮ್ಮ ಕ್ಯಾಂಪಸ್ನಲ್ಲಿ ಲಭ್ಯವಿರುವ ಆಪ್ತ ಸಹಾಯಕರ ನೆರವು ಪಡೆಯಬೇಕು. ಮಾನಸಿಕ ಆರೋಗ್ಯ ವೃತ್ತಿಪರರೊಂದಿಗೆ ಮಾತನಾಡಲು ಅಗತ್ಯ ಇರುವವರು ದೂರವಾಣಿ ಸಂಖ್ಯೆ 080 47113444 ಅನ್ನು ಸಂಪರ್ಕಿಸಬೇಕು ಎಂದು ತಿಳಿಸಿದ್ದಾರೆ.