ಬೆಂಗಳೂರು: ಭ್ರೂಣಲಿಂಗ ಪತ್ತೆ ಹಾಗೂ ಹತ್ಯೆ ಕೇಸ್ ಸಂಬಂಧ ದಿನೇ ದಿನೇ ಮಹತ್ವದ ಬೆಳವಣಿಗೆಗಳು ನಡೆಯುತ್ತಲೇ ಇವೆ. ಸದ್ಯ ಈ ಕೇಸ್ ಸಂಬಂಧ ಮತ್ತೊಬ್ಬ ಆರೋಪಿಯನ್ನು ಬೈಯಪ್ಪನಹಳ್ಳಿ ಪೊಲೀಸರು ಬಂಧಿಸಿದ್ದಾರೆ. ಡಾ.ಚಂದನ್ ಬಲ್ಲಾಳ್ ಆಸ್ಪತ್ರೆಯಲ್ಲಿ ನರ್ಸ್ ಆಗಿದ್ದ ಮಂಜುಳಾ ಅವರನ್ನು ಬಂಧಿಸಲಾಗಿದೆ. ಪ್ರಕರಣ ಸಂಬಂಧ ಈವರೆಗೂ 10 ಜನರು ಅರೆಸ್ಟ್ ಆಗಿದ್ದಾರೆ. ಇನ್ನು ಮತ್ತೊಂದೆಡೆ ಈ ಪ್ರಕರಣವನ್ನು ಅಧಿಕೃತವಾಗಿ ಸಿಐಡಿಗೆ ವರ್ಗಾವಣೆ ಮಾಡಲು ತಯಾರಿ ನಡೆದಿದೆ.
SmartPhones: ಹೊಸ ಫೋನ್ ಕೊಳ್ಳುವ ಯೋಚನೆಯಲ್ಲಿದ್ದೀರಾ: ಇಲ್ಲಿದೆ ಕಮ್ಮಿ ಬೆಲೆಗೆ 5G ನ್ಯೂ ಮೊಬೈಲ್ಸ್!
ಭ್ರೂಣಲಿಂಗ ಪತ್ತೆ ಹಾಗೂ ಹತ್ಯೆ ಪ್ರಕರಣ ಬೆಳಕಿಗೆ ಬಂದ ಬಳಿಕ ನರ್ಸ್ ಮಂಜುಳಾ ಅವರು ಕೆಲಸ ಬಿಟ್ಟಿದ್ದರು. ಬಳಿಕ ಮೈಸೂರಿನ ಮತ್ತೊಂದು ಖಾಸಗಿ ಆಸ್ಪತ್ರೆಗೆ ಕೆಲಸಕ್ಕೆ ಸೇರಿದ್ದರು. ಕಳೆದ ಹಲವಾರು ದಿನಗಳಿಂದ ಪೊಲೀಸರು ಮಂಜುಳಾರನ್ನು ಹುಡುಕಾಟ ನಡೆಸುತ್ತಿದ್ದರು. ಸದ್ಯ ಮಂಜುಳಾ ಕೆಲಸ ಮಾಡ್ತಿದ್ದ ಖಾಸಗಿ ಆಸ್ಪತ್ರೆಗೆ ತೆರಳಿ ಬೈಯ್ಯಪ್ಪಹಳ್ಳಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಹೆಚ್ಚಿನ ವಿಚಾರಣೆ ನಡೆಸಲಾಗುತ್ತಿದೆ.