ಗದಗ: ಬೀಡಾಡಿ ದನಗಳು ನಗರದ ರಸ್ತೆಯನ್ನೇ ತಮ್ಮ ವಾಸಸ್ಥಳವನ್ನಾಗಿ ಮಾಡಿಕೊಂಡಿದ್ದರಿಂದ ರಸ್ತೆಗಳಲ್ಲಿ ಮಹಿಳೆಯರು, ಮಕ್ಕಳು ಓಡಾಡಲು ಭಯ ಪಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಹೌದು ಗದಗ-ಬೆಟಗೇರಿ ಅವಳಿ ನಗರದಲ್ಲಿ ಬೀದಿ ದನಗಳ ಹಾವಳಿ ಮಿತಿ ಮೀರಿದ್ದು, ರಸ್ತೆಯಲ್ಲಿ ನಡೆದುಕೊಂಡು ಹೋಗ್ತಿದ್ದ ವ್ಯಕ್ತಿ ಮೇಲೆ ಏಕಾಏಕಿ ಅಟ್ಯಾಕ್ ಮಾಡಲು ಮುಂದಾಗಿದೆ.
ಸ್ವಲ್ಪದರಲ್ಲೇ ಅನಾಹುತ ತಪ್ಪಿದೆ. ಗದಗದ ಬೆಟಗೇರಿಯಲ್ಲಿ ಈ ಘಟನೆ ನಡೆದಿದ್ದು, ವ್ಯಕ್ತಿಗೆ ಗೂಳಿ ಗುದ್ದೋ ದೃಶ್ಯ ಸಿಸಿ ಟಿವಿಯಲ್ಲಿ ಸೆರೆಯಾಗಿದೆ. ಕಳೆದ 15 ದಿನಗಳಲ್ಲಿ 8 ಜನರ ಮೇಲೆ ಅಟ್ಯಾಕ್ ಮಾಡಲು ಮುಂದಾಗಿದೆ. ಇದರಿಂದ ಜನರಿಗೆ ರಸ್ತೆಯಲ್ಲಿ ಓಡಾಡೋಕೂ ಹೆದರೋ ಪರಿಸ್ಥಿತಿ ನಿರ್ಮಾಣವಾಗಿದೆ. ಬೀದಿ ದನಗಳನ್ನ ಶಿಫ್ಟ್ ಮಾಡದ ನಗರಸಭೆ ವಿರುಧ್ಧ ಸಾರ್ವಜನಿಕರ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.