ಬೆಂಗಳೂರು: ವೈದ್ಯರೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಮಹಾಲಕ್ಷ್ಮಿ ಲೇಔಟ್ನಲ್ಲಿ ನಡೆದಿದೆ. ನಟರಾಜ್ ಆತ್ಮಹತ್ಯೆಗೆ ಶರಣಾದ ವೈದ್ಯ. ಇವರು ಮಂಡ್ಯ ಆರೋಗ್ಯ ಇಲಾಖೆಯ ವೆಲ್ಫೇರ್ ಆಫೀಸರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದು, ಇಂದು ಮಹಾಲಕ್ಷ್ಮಿ ಲೇಔಟ್ನಲ್ಲಿರುವ ತಮ್ಮ ನಿವಾಸದಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹೃದಯಾಘಾತಕ್ಕೊಳಗಾದ ಹಿನ್ನೆಲೆ ಕಳೆದ ಕೆಲ ದಿನಗಳಿಂದ ನಟರಾಜ್ ರಜೆಯಲ್ಲಿದ್ದರು.
MS Dhoni News car: 3.30 ಕೋಟಿಯ ಕಾರು ಖರೀದಿಸಿದ MS ಧೋನಿ: ಸೋಶಿಯಲ್ ಮೀಡಿಯಾದಲ್ಲಿ ಫುಲ್ ವೈರಲ್!
ಇಂದು ಮಂಡ್ಯಗೆ ಹೋಗಿ ರಿಪೋರ್ಟ್ ಮಾಡಿಕೊಳ್ಳಬೇಕಿತ್ತು. ಆದರೆ ಮಂಡ್ಯ ಡಿಹೆಚ್ಒ ಇವರಿಗೆ ರಿಪೋರ್ಟ್ ಮಾಡಿಕೊಳ್ಳದಂತೆ ಸೂಚನೆ ನೀಡಿದ್ದು, ಕಿರುಕುಳದಿಂದ ಬೇಸತ್ತು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಆರೋಪಿಸಲಾಗಿದೆ. ಬೆಟ್ಟಸ್ವಾಮಿ ಎಂಬ ಅಧಿಕಾರಿಯನ್ನು ಪಾಂಡವಪುರ ಟಿಹೆಚ್ಒ ಆಗಿ ವರ್ಗಾವಣೆ ಮಾಡಲಾಗಿತ್ತು. ಆದರೆ ಬೆಟ್ಟಸ್ವಾಮಿ ಪಾಂಡವಪುರದಲ್ಲಿ ರಿಪೋರ್ಟ್ ಮಾಡಿಕೊಂಡಿರಲಿಲ್ಲ. ಡಿಹೆಚ್ಒ ಬೆಟ್ಟಸ್ವಾಮಿ ಪರವಾಗಿ ಇದ್ದರು. ಈ ಹಿನ್ನೆಲೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಶಂಕಿಸಲಾಗಿದೆ.