ಶಿವಮೊಗ್ಗ: ಶೀಘ್ರದಲ್ಲಿಯೇ ಜಗದೀಶ್ ಶೆಟ್ಟರ್ ಬಿಜೆಪಿ ಸೇರುತ್ತಾರೆ. ಇತ್ತ ಲೋಕಸಭೆ ಚುನಾವಣೆ ಸಂದರ್ಭದಲ್ಲಿ ಡಿಕೆ ಶಿವಕುಮಾರ್ ಜೈಲಿಗೆ ಹೋಗ್ತಾರೆ ನೋಡ್ತಾ ಇರಿ ಎಂದು ಬಿಜೆಪಿ ಹಿರಿಯ ನಾಯಕ ಕೆಎಸ್ ಈಶ್ವರಪ್ಪ ಭವಿಷ್ಯ ನುಡಿದಿದ್ದಾರೆ. ಶಿವಮೊಗ್ಗದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು,
” ಕಾಂಗ್ರೆಸ್ಗೆ ಅಧಿಕಾರ ಕೊಟ್ಟು ಕಳ್ಳರ ಕೈಯಲ್ಲಿ ಬೀಗ ಕೊಟ್ಪಂತಾಗಿದೆ. ಸಚಿವ ಸಂಪುಟ ಡಿಕೆಶಿ ಮೇಲಿನ ಸಿಬಿಐ ಕೇಸ್ ವಾಪಸ್ ಪಡೆದಿದೆ. ಸಿಬಿಐ ತನಿಖೆ ಶೇಕಡಾ 90 ರಷ್ಟು ಮುಗಿದಿದೆ. ಲೋಕಸಭೆ ಚುನಾವಣೆ ಮೊದಲು ಅಥವಾ ನಂತರ ಡಿಕೆಶಿ ಜೈಲಿಗೆ ಹೋಗುವುದು ಗ್ಯಾರಂಟಿ ” ಎಂದರು.
MS Dhoni News car: 3.30 ಕೋಟಿಯ ಕಾರು ಖರೀದಿಸಿದ MS ಧೋನಿ: ಸೋಶಿಯಲ್ ಮೀಡಿಯಾದಲ್ಲಿ ಫುಲ್ ವೈರಲ್!
” ಜಗದೀಶ್ ಶೆಟ್ಟರ್ ಕುಟುಂಬ ಹಿಂದೂ ಸಮಾಜ ರಕ್ತಗತ ಮಾಡಿಕೊಂಡ ಕುಟುಂಬ. ಜಗದೀಶ್ ಶೆಟ್ಟರ್ ತಂದೆ ಹುಬ್ಬಳ್ಳಿ ಮೇಯರ್, ಶಾಸಕರಾಗಿದ್ದರು. ಜಗದೀಶ್ ಶೆಟ್ಟರ್ ಮೈಯಲ್ಲಿ ಹಿಂದು ರಕ್ತ ಹರಿಯುತ್ತಿದೆ. ಕಾಂಗ್ರೆಸ್ ಸಂಸ್ಕೃತಿ, ಜಮೀರ್ ಅವರ ಧೋರಣೆ ಅವರಿಗೆ ಹೊಂದಿಕೊಳ್ಳಲ್ಲ. ಹೀಗಾಗಿಯೇ ಶೆಟ್ಟರ್ ಹೊರಗೆ ಬರುತ್ತಾರೆ. ಖಂಡಿತ ಶೆಟ್ಟರ್ ಅವರು ಬಿಜೆಪಿಗೆ ವಾಪಸ್ ಬರುತ್ತಾರೆ ” ಎಂದರು.