ಶೂಟಿಂಗ್ ವೇಳೆ ಭಾರೀ ಅನಾಹುತ (Accident) ಸಂಭವಿಸಿ, ಪೆಟ್ಟು ಮಾಡಿಕೊಂಡಿದ್ದ ನಟ ಮಂಡ್ಯ ರಮೇಶ್ (Mandya Ramesh) ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆ ಪಡೆದುಕೊಂಡು ಇದೀಗ ಮನೆಗೆ ವಾಪಸ್ಸಾಗಿದ್ದಾರೆ. ಸೋಮವಾರ ಈ ಘಟನೆ ನಡೆದಿದ್ದು ಕೈಗೆ, ಹೊಟ್ಟೆಗೆ, ಕಾಲಿಗೆ, ತಲೆಗೆ ಏಟು ಬಿದ್ದಿದೆ. ಕೂಡಲೇ ಅವರನ್ನು ಬೆಂಗಳೂರಿನ ಆಸ್ಪತ್ರೆಗೆ (Hospital) ದಾಖಲಿಸಲಾಗಿತ್ತು.
ಆಸೆ ಧಾರಾವಾಹಿ ಶೂಟಿಂಗ್ ವೇಳೆ ಅವಘಡ ನಡೆದಿದ್ದು, ಅವರಿಗೆ ತೀವ್ರ ಗಾಯವಾಗಿತ್ತು. ಬೆಂಗಳೂರಿನ ರಾಜರಾಜೇಶ್ವರಿ ನಗರದ ಕಲ್ಲು ಕ್ವಾರಿಯಲ್ಲಿ ಚಿತ್ರೀಕರಣ ನಡೆಯುತ್ತಿತ್ತು. ಈ ವೇಳೆ ರಮೇಶ್ ಕಾಲು ಜಾರಿ ಬಿದ್ದಿದ್ದರು. ಬಿದ್ದ ರಭಸಕ್ಕೆ ಅವರ ದೇಹದ ನಾನಾ ಭಾಗಗಳಿಗೆ ತೀವ್ರ ತೆರನಾದ ಪೆಟ್ಟಾಗಿತ್ತು. ಸ್ಟಾರ್ ಸುವರ್ಣ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಆಸೆ ಸೀರಿಯಲ್ ನಲ್ಲಿ ಮಂಡ್ಯ ರಮೇಶ್ ಪ್ರಮುಖ ಪಾತ್ರ ಮಾಡುತ್ತಿದ್ದಾರೆ.
MS Dhoni News car: 3.30 ಕೋಟಿಯ ಕಾರು ಖರೀದಿಸಿದ MS ಧೋನಿ: ಸೋಶಿಯಲ್ ಮೀಡಿಯಾದಲ್ಲಿ ಫುಲ್ ವೈರಲ್!
ಈ ಧಾರಾವಾಹಿಯ ದೃಶ್ಯದ ಚಿತ್ರೀಕರಣದಲ್ಲಿ ಇಂಥದ್ದೊಂದು ಅವಘಡ ಸಂಭವಿಸಿದೆ. ನಾಲ್ಕೈದು ಅಡಿಯಿಂದ ಜಲ್ಲಿಕಲ್ಲ ಮೇಲೆ ರಮೇಶ್ ಬಿದ್ದಿದ್ದರು ಎಂದು ಹೇಳಲಾಗುತ್ತಿದೆ. ರಮೇಶ್ ಅರವಿಂದ್ ನಿರ್ಮಾಣದಲ್ಲಿ ಈ ಧಾರಾವಾಹಿ ಮೂಡಿ ಬರುತ್ತಿದ್ದು, ಭಾರೀ ನಿರೀಕ್ಷೆ ಮೂಡಿಸಿದ ಧಾರಾವಾಹಿ ಇದಾಗಿದೆ. ಸದ್ಯ ಚಿಕಿತ್ಸೆ ಪಡೆದಿರುವ ಮಂಡ್ಯ ರಮೇಶ್ ಅವರಿಗೆ ಒಂದು ತಿಂಗಳ ಕಾಲ ರೆಸ್ಟ್ ತಗೆದುಕೊಳ್ಳುವಂತೆ ವೈದ್ಯರು ತಿಳಿಸಿದ್ದಾರೆ. ಕಿರುತೆರೆ, ರಂಗಭೂಮಿ ಮತ್ತು ಸಿನಿಮಾದಲ್ಲಿ ಸಕ್ರೀಯರಾಗಿರುವ ಮಂಡ್ಯ ರಮೇಶ್ ಬೇಗ ಗುಣಮುಖರಾಗಲಿ ಎಂದು ಅಭಿಮಾನಿಗಳು ಹಾರೈಸಿದ್ದಾರೆ.