ಬೆಂಗಳೂರು:– ಬೆಂಗಳೂರಿನ ವಾಣಿವಿಲಾಸ ಸರ್ಕಾರಿ ಆಸ್ಪತ್ರೆಯಲ್ಲಿ ಜಿರಳೆ ಕಾಟ ಜೋರಾಗಿದ್ದು, ಮಕ್ಕಳು, ಬಾಣಂತಿಯರು ಪರದಾಟ ನಡೆಸಿದ್ದಾರೆ.
ಆಸ್ಪತ್ರೆ ವೈದ್ಯರು, ಸಿಬ್ಬಂದಿ ಎಡವಟ್ಟಿನಿಂದ ಜಿರಳೆ ಕಾಟಕ್ಕೆ ಮಕ್ಕಳು, ಆಸ್ಪತ್ರೆಯಲ್ಲಿರುವ ಬಾಣಂತಿಯರು ಪರದಾಡಿದ್ದಾರೆ. 2 ದಿನದ ಹಿಂದೆ ಗಂಡು ಮಗುವಿಗೆ ಆಶಾರಾಣಿ ಜನ್ಮ ನೀಡಿದ್ದರು. ಬಾಣಂತಿ ವಾರ್ಡ್ನಲ್ಲಿ ಆಸ್ಪತ್ರೆಯ ಸಿಬ್ಬಂದಿ ಬೆಡ್ ಸ್ವಚ್ಛತೆ ಮಾಡಿಲ್ಲ. ಹೆರಿಗೆ ವಾರ್ಡ್ನಲ್ಲೂ ಸ್ವಚ್ಛತೆ ಇಲ್ಲದ್ದರಿಂದ ಜಿರಳೆ ಕಾಟ ಹೆಚ್ಚಿದೆ.
ಈ ವಿಚಾರವಾಗಿ ವಾಣಿವಿಲಾಸ ಆಸ್ಪತ್ರೆ ಅಧೀಕ್ಷಕಿ ಸವಿತಾ ಮಾತನಾಡಿ, ಹಸುಗೂಸಿಗೆ ಜಿರಳೆ ಕಚ್ಚಿಲ್ಲ, ಬಟ್ಟೆಯಿಂದ ರ್ಯಾಷಸ್ ಆಗಿದೆ. ವಾಣಿವಿಲಾಸ ಆಸ್ಪತ್ರೆಯಿಂದ ಯಾವುದೇ ಸಮಸ್ಯೆಯಾಗಿಲ್ಲ. ಪೋಷಕರು ಬಂದು ನಮ್ಮ ಬಳಿ ಕೂಡ ಹೇಳಿಲ್ಲ. ಕೂಡಲೇ ಮಕ್ಕಳ ತಜ್ಞರನ್ನು ಕರೆಸಿ ಮಾಹಿತಿ ಪಡೆದಿದ್ದೇವೆ. ಆದರೆ ಯಾಕೆ ಆ ರೀತಿ ಹೇಳಿದ್ದಾರೆ ಎಂದು ಗೊತ್ತಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.