ಮಂಗಳೂರು: ಡಯಾಲಿಸಿಸ್ ಸಮಸ್ಯೆ ನಮ್ಮ ಸರ್ಕಾರದಿಂದ ಆಗಿದ್ದಲ್ಲ, ಶಾಶ್ವತ ಪರಿಹಾರಕ್ಕೆ ನಾವು ಕೆಲಸ ಮಾಡ್ತಿದ್ದೇವೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದರು. ಸದ್ಯಕ್ಕೆ ಡಯಾಲಿಸಿಸ್ ಸೇವೆ ಆಸ್ಪತ್ರೆ ಸಿಬ್ಬಂದಿಗಳಿಂದ ನಿರ್ವಹಿಸಲು ಆರೋಗ್ಯ ಅಧಿಕಾರಿಗಳಿಗೆ ಸೂಚಿಸಲಾಗಿದೆ ನಾವು ಸಿಬ್ಬಂದಿಗಳ ಪರವಾಗಿಯೇ ಇದ್ದೇವೆ. ಸರ್ಕಾರ ಮಧ್ಯಪ್ರವೇಶಿಸಿ ಏಜನ್ಸಿಯವರಿಗೆ ಕೆಲವು ಬಾಕಿ ವೇತನ ಕೊಡಿಸಲಾಗಿದೆ ಎಂದರು.
MS Dhoni News car: 3.30 ಕೋಟಿಯ ಕಾರು ಖರೀದಿಸಿದ MS ಧೋನಿ: ಸೋಶಿಯಲ್ ಮೀಡಿಯಾದಲ್ಲಿ ಫುಲ್ ವೈರಲ್!
ಡಯಾಲಿಸಿಸ್ ಆರೋಗ್ಯ ಸೇವೆಯಲ್ಲಿ ಸಮಸ್ಯೆಯಾಗಲು ಮೂಲ ಕಾರಣ ಹಿಂದಿನ ಸರ್ಕಾರದ ಅವಧಿಯಲ್ಲಿ ನೇಮಕ ಗೊಂಡಿರುವ ಎರಡು ಏಜನ್ಸಿಗಳು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಮಂಗಳೂರಿನಲ್ಲಿ ಇಂದು ಈ ಕುರಿತು ಮಾಧ್ಯಮದವರ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದ ಸಚಿವರು, ನಾನು ಆರೋಗ್ಯ ಸಚಿವನಾದ ಬಳಿಕ ಡಯಾಲಿಸಿಸ್ ಕೇಂದ್ರಗಳ ಸಮಸ್ಯೆಗೆ ಶಾಶ್ವತ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಹೆಚ್ಚು ಒತ್ತು ನೀಡಿ ಕೆಲಸ ಮಾಡ್ತಿದ್ದೇನೆ ಎಂದು ತಿಳಿಸಿದರು.