ಬೆಂಗಳೂರು : ಯಾರೂ ಏನೇ ಹೇಳಿದರೂ ಸಾಮಾಜಿಕ ನ್ಯಾಯದಲ್ಲಿ ರಾಜಿ ಇಲ್ಲದೆ ಕೆಲಸ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದರು. ಶಂಕುಸ್ಥಾಪನೆ ಕಾರ್ಯಕ್ರಮವನ್ನು ನೆರೆವೇರಿಸಿ ಮಾತನಾಡಿದರು. ಸಮಾಜದಲ್ಲಿ ಅವಕಾಶ ವಂಚಿತ ಜನರಿಗೆ, ಶತಶತಮಾನಗಳಿಂದ ಅಕ್ಷರ ಸಂಸ್ಕೃತಿ ಯಿಂದ ವಂಚಿತರಾಗಿರುವವರು, ಸಾಮಾಜಿಕ ನ್ಯಾಯದಿಂದ ಇಂದಿಗೂ ವಂಚಿತರಾದ ಜನರ ಪರವಾಗಿ ನಾವು ಇರುತ್ತೇವೆ. ನಿಮ್ಮೊಂದಿಗೂ ಇರುತ್ತೇವೆ ಎಂದರು.
MS Dhoni News car: 3.30 ಕೋಟಿಯ ಕಾರು ಖರೀದಿಸಿದ MS ಧೋನಿ: ಸೋಶಿಯಲ್ ಮೀಡಿಯಾದಲ್ಲಿ ಫುಲ್ ವೈರಲ್!
ಗಾಣಿಗ ಸಮಾಜದವರು ಎಣ್ಣೆ ಉತ್ಪಾದನೆಯ ವೃತ್ತಿ ಮಾಡುತ್ತಿದ್ದವರು. ಇತ್ತೀಚಿನ ವರ್ಷಗಳಲ್ಲಿ ಕೈಗಾರೀಕರಣವಾದ ನಂತರ, ಎಣ್ಣೆ ತಯಾರಿಸುವ ವೃತ್ತಿಯನ್ನು ಬಿಡಬೇಕಾದ ಪರಿಸ್ಥಿತಿ ಇದೆ. ಅನೇಕರು ಇದರಿಂದ ನಿರುದ್ಯೋಗಿಗಳಾಗಿದ್ದಾರೆ. ಈ ಸಮಾಜದಲ್ಲಿ ಜಮೀನು ಹೊಂದಿದವರು ಬಹಳ ಕಡಿಮೆ, ಸಣ್ಣ ರೈತರು ಬಹಳ ಕಡಿಮೆ ಇದ್ದಾರೆ ಎಂದರು.