ಹೈದರಾಬಾದ್: ಪಂಚರಾಜ್ಯ ಚುನಾವಣೆಯ ಪೈಕಿ ನಾಲ್ಕು ರಾಜ್ಯಗಳ ಚುನಾವಣಾ ಫಲಿತಾಂಶ (4 State Election Results) ಹೊರಬಿದ್ದಿದ್ದು, ತೆಲಂಗಾಣದಲ್ಲಿ ಕಾಂಗ್ರೆಸ್ ಜಯ ಸಾಧಿಸಿದೆ. 119 ಸ್ಥಾನಗಳ ಪೈಕಿ 69 ಸ್ಥಾನಗಳಲ್ಲಿ ಸ್ಪಷ್ಟ ಬಹುಮತ ಕಾಯ್ದುಕೊಂಡಿದ್ದು, ಅಧಿಕೃತ ಘೋಷಣೆ ಆಗಬೇಕಿದೆ. ಆಡಳಿತಾರೂಢ BRS ಹಿಂದಿಕ್ಕಿ ಅಧಿಕಾರದ ಚುಕ್ಕಾಣಿ ಹಿಡಿಯುವತ್ತ ಕಾಂಗ್ರೆಸ್ ಮುನ್ನಡೆಸಿದ ಶ್ರೇಯ ರೇವಂತ್ ರೆಡ್ಡಿ (Revanth Reddy) ಅವರಿಗೆ ಸಲ್ಲುತ್ತದೆ ಎಂಬುದನ್ನು ‘ಕೈ’ ನಾಯಕರು ಪ್ರತಿಪಾದಿಸಿದ್ದಾರೆ.
ಈ ಬೆನ್ನಲ್ಲೇ ಕಾಂಗ್ರೆಸ್ ಮಾಜಿ ಸಂಸದೆ ಹಾಗೂ ಸ್ಯಾಂಡಲ್ವುಡ್ ನಟಿ ರಮ್ಯಾ (Actor Ramya), ರೇವಂತ್ ರೆಡ್ಡಿ ಹಾಗೂ ಕಾಂಗ್ರೆಸ್ಗೆ ಅಭಿನಂದನೆ ಸಲ್ಲಿಸಿದ್ದಾರೆ. ಸೋಶಿಯಲ್ ಮೀಡಿಯಾ X ಖಾತೆಯಲ್ಲಿ ರೇವಂತ್ ರೆಡ್ಡಿ ಫೋಟೋ ಹಂಚಿಕೊಂಡಿದ್ದು, ಕಾಂಗ್ರೆಸ್ಗೆ ಸ್ವೀಟೆಸ್ಟ್ ವಿಕ್ಷರಿ (ಅತ್ಯಂತ ಸಿಹಿಯಾದ ಜಯ) ಎಂದು ಬರೆದುಕೊಂಡಿದ್ದಾರೆ. ಈ ಪೋಸ್ಟ್ ಅನ್ನು ರೇವಂತಿ ರೆಡ್ಡಿ ಹಾಗೂ ರಾಷ್ಟ್ರೀಯ ಕಾಂಗ್ರೆಸ್ಗೆ ಟ್ಯಾಗ್ ಮಾಡಿದ್ದಾರೆ.