ಐಜ್ವಾಲ್: ಪಂಚರಾಜ್ಯಗಳ ಚುನಾವಣೆಯಲ್ಲಿ ನಾಲ್ಕು ರಾಜ್ಯ ಫಲಿತಾಂಶ ಹೊರಬಿದ್ದಿದ್ದು,ಇಂದು ಮಿಜೋರಾಂ ಚುನಾವಣೆಯ ಮತ ಏಣಿಕೆ ರಾಜ್ಯದಾದ್ಯಂತ 13 ಕೇಂದ್ರಗಳಲ್ಲಿ ಬೆಳಿಗ್ಗೆ 8 ಗಂಟೆಗೆ ಮತ ಎಣಿಕೆ ಆರಂಭವಾಗಲಿದೆ.ಮಿಜೋರಾಂನ ವಿಧಾನಸಭೆಯ 40 ಸ್ಥಾನಗಳಿಗೆ ನವೆಂಬರ್ 8 ರಂದು ನಡೆದಿದ್ದ ಚುನಾವಣೆಯಲ್ಲಿ ಶೇಕಡ 80.43 ರಷ್ಟು ಮತದಾನವಾಗಿದೆ. ಶೇಕಡ 79.61ರಷ್ಟು ಪುರುಷರು ಮತ ಚಲಾಯಿಸಿದ್ದರೆ, ಶೇಕಡ 81.21 ರಷ್ಟು ಮಹಿಳೆಯರು ಮತ ಚಲಾಯಿಸಿದ್ದಾರೆ. 2018ರ ಚುನಾವಣೆಯಲ್ಲಿ ಶೇಕಡ 81.61ರಷ್ಟು ಮತದಾನವಾಗಿತ್ತು. ಡಿ.3ರಂದು ಮತ ಎಣಿಕೆ ನಡೆಯಲಿದೆ. 8.57 ಲಕ್ಷ ಮತದಾರರನ್ನು ಹೊಂದಿರುವ ರಾಜ್ಯದಲ್ಲಿ ಎಂಎನ್ಎಫ್, ಝಡ್ಪಿಎಂ ಮತ್ತು ಕಾಂಗ್ರೆಸ್ ನಡುವೆ ಪೈಪೋಟಿ ಇದೆ.
ಮಿಜೋರಾಮ್ನಲ್ಲಿ ಆಡಳಿತಾರೂಢ ಮಿಜೋ ನ್ಯಾಷನಲ್ ಫ್ರಂಟ್ (MNF), ಪ್ರಮುಖ ವಿರೋಧ ಪಕ್ಷ ಝೋರಾಂ ಪೀಪಲ್ಸ್ ಮೂವ್ಮೆಂಟ್ (ZPM) ಮತ್ತು ಕಾಂಗ್ರೆಸ್ (Congress Party) ಮಧ್ಯೆ ಸ್ಪರ್ಧೆ ಏರ್ಪಟ್ಟಿತ್ತು. ಮತದಾರರು ಆಡಳಿತಾರೂಢ ಎಂಎನ್ಎಫ್ ಪರವಾಗಿ ತಮ್ಮ ಒಲವು ತೋರಿಸಿದ್ದಾರೆ ಎಂದು ಎಕ್ಸಿಟ್ ಪೋಲ್ಗಳು ಹೇಳುತ್ತಿವೆ. ಇಷ್ಟಾಗಿಯೂ ಕೆಲವು ಸಮೀಕ್ಷೆಗಳು ಅತಂತ್ರ ವಿಧಾನಸಭೆಯನ್ನು ಊಹಿಸಿವೆ. ಅಂತಿಮವಾಗಿ ಯಾರ ಪಾಲಿಗೆ ಜಯ ದಕ್ಕಲಿದೆ ಎಂಬುದು ಸೋಮವಾರ ಗೊತ್ತಾಗಲಿದೆ. ಬೆಳಗ್ಗೆ 8 ಗಂಟೆಯಿಂದ ಮತ ಎಣಿಕೆ ಆರಂಭವಾಗಲಿದ್ದು, ಮಧ್ಯಾಹ್ನದ ವೇಳೆಗೆ ಫಲಿತಾಂಶದ ಸ್ಪಷ್ಟ ಚಿತ್ರಣ ದೊರೆಯಲಿದೆ.