ಗದಗ: ವಿಕಲಚೇತನರಲ್ಲಿ ಆತ್ಮಸ್ಥೈರ್ಯ ಮೂಡಿಸುವ ಕೆಲಸವಾಗಬೇಕು. ಸಮಾಜದಲ್ಲಿ ವಿಕಲಚೇತನರನ್ನು ಅಶಕ್ತರು ಎಂಬ ಕೀಳರಿಮೆಯಿಂದ ನೋಡಬಾರದು ಎಂದು ರಾಜ್ಯದ ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರಗಳು, ಶಾಸನ ರಚನೆ ಮತ್ತು ಪ್ರವಾಸೋದ್ಯಮ ಇಲಾಖೆ ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಕೆ.ಪಾಟೀಲ ತಿಳಿಸಿದರು.
ನಗರದ ಜಿಲ್ಲಾಡಳಿತ ಭವನದ ಆಡಿಟೋರಿಯಂ ಹಾಲ್ದಲ್ಲಿ ಗದಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಜಿಲ್ಲೆಯಲ್ಲಿ ವಿಕಲಚೇತನರ ಕ್ಷೇತ್ರದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಸಂಘ ಸಂಸ್ಥೆಗಳು ಇವರುಗಳ ಸಂಯುಕ್ತಾಶ್ರಯದಲ್ಲಿ ಜರುಗಿದ ವಿಶ್ವ ವಿಕಲಚೇತನರ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
MS Dhoni News car: 3.30 ಕೋಟಿಯ ಕಾರು ಖರೀದಿಸಿದ MS ಧೋನಿ: ಸೋಶಿಯಲ್ ಮೀಡಿಯಾದಲ್ಲಿ ಫುಲ್ ವೈರಲ್!
ವಿಕಲಚೇತನರು ವಿಕಲತೆಯನ್ನು ಮೆಟ್ಟಿ ನಿಂತು ತಮ್ಮಲ್ಲಿ ಹುದುಗಿರುವ ಕಲೆಯನ್ನು ಪ್ರೋತ್ಸಾಹಿಸಬೇಕು. ವಿಕಲಚೇತನರನ್ನು ಇತರ ರೀತಿಯಿಂದ ಶಕ್ತನಾಗಿರುವವನು ( Differently Abled Person ) ಎಂದು ಜಗತ್ತು ಗುರುತಿಸುತ್ತಿದೆ. ವಿಕಲಚೇತನರು ಗಣಿತ, ಕಂಪ್ಯೂಟರ್ ಜ್ಞಾನ, ಸಂಗೀತ, ಸಾಹಿತ್ಯ, ಕಲೆ, ವಿವಿಧ ಹಂತದ ಸಮಾಜ ಸೇವೆಯಲ್ಲಿ ತಮ್ಮ ಶಕ್ತಿ ಹಾಗೂ ಯುಕ್ತಿಯಿಂದ ತಮ್ಮದೇ ಆದ ಛಾಪು ಮೂಡಿಸಿದ್ದಾರೆ.