ಬೆಳಗಾವಿ: ವಿಧಾನಮಂಡಲದ ಚಳಿಗಾಲ ಅಧಿವೇಶನಕ್ಕಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ನಗರಕ್ಕೆ ಆಗಮಿಸಿದರು. ಸಾಂಬ್ರಾ ವಿಮಾನ ನಿಲ್ದಾಣದ ಹೊರಗಡೆ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಅವರು ಗ್ಯಾರಂಟಿ ಯೋಜನೆಗಳನ್ನು ಸಮರ್ಥಿಸಿಕೊಂಡರು. ಗ್ಯಾರಂಟಿ ಗಳನ್ನು ಘೋಷಿಸಿದಕ್ಕಾಗೇ ಕಾಂಗ್ರೆಸ್ ತೆಲಂಗಾಣದಲ್ಲಿ ಗೆಲ್ಲುವುದು ಸಾಧ್ಯವಾಯಿತು ಮತ್ತು ಮಧ್ಯಪ್ರದೇಶದ ಮುಖ್ಯಮಂತ್ರಿ ತಮ್ಮ ರಾಜ್ಯದಲ್ಲಿ ಗ್ಯಾರಂಟಿಗಳನ್ನು ಘೋಷಿಸಿ ಚುನಾವಣೆ ಗೆದ್ದಿದ್ದಾರೆ ಎಂದು ಸಿದ್ದರಾಮಯ್ಯ ಹೇಳಿದರು.
MS Dhoni News car: 3.30 ಕೋಟಿಯ ಕಾರು ಖರೀದಿಸಿದ MS ಧೋನಿ: ಸೋಶಿಯಲ್ ಮೀಡಿಯಾದಲ್ಲಿ ಫುಲ್ ವೈರಲ್!
ಕರ್ನಾಟಕದಲ್ಲಿ ಕಾಂಗ್ರೆಸ್ ಗ್ಯಾರಂಟಿಗಳನ್ನು ಘೋಷಿಸಿದ್ದು ಚುನಾವಣೆಯಲ್ಲಿ ಗೆಲ್ಲುವುದಕ್ಕಲ್ಲ, ಅವು ಎಲ್ಲಾ ವರ್ಗಗಳ ಬಡವರಿಗೆ ನೆರವಾಗಲು ರೂಪಿಸಿರುವ ಕಾರ್ಯಕ್ರಮಗಳು ಎಂದು ಹೇಳಿದ ಸಿದ್ದರಾಮಯ್ಯ, ಒಬ್ಬ ವಿರೋಧ ಪಕ್ಷದ ನಾಯಕನ ಆಯ್ಕೆ ಮಾಡಲು 6 ತಿಂಗಳು ಸಮಯ ತೆಗೆದುಕೊಂಡ ಬಿಜೆಪಿಗೆ ತಮ್ಮ ಸರ್ಕಾರಕ್ಕೆ ಸಲಹೆ ನೀಡುವ ನೈತಿಕ ಹಕ್ಕಿಲ್ಲ ಎಂದು ಹೇಳಿದರು.