ಹೈದರಾಬಾದ್: ಕುಡಿಯುವ ನೀರಿಗಾಗಿ ಆಂಧ್ರಪ್ರದೇಶ (Andhra Pradesh) ಮತ್ತು ತೆಲಂಗಾಣ (Telangana) ರಾಜ್ಯಗಳ ನಡುವೆ ಉದ್ವಿಗ್ನತೆ ಉಂಟಾಗಿದೆ. ಆಂಧ್ರಪ್ರದೇಶವು ನಾಗಾರ್ಜುನ ಸಾಗರ ಅಣೆಕಟ್ಟಿನ ಉಸ್ತುವಾರಿ ವಹಿಸಿಕೊಂಡು ನೀರು ಬಿಡುಗಡೆ ಮಾಡಿದೆ. ಇದು ಎರಡು ರಾಜ್ಯಗಳ ಸಂಘರ್ಷಕ್ಕೆ ಕಾರಣವಾಗಿದೆ. ಬೆಳಗಿನ ಜಾವ ತೆಲಂಗಾಣದ ಬಹುತೇಕ ಅಧಿಕಾರಿಗಳು ಮತದಾನದಲ್ಲಿ ನಿರತರಾಗಿದ್ದಾಗ ಸುಮಾರು 700 ಆಂಧ್ರ ಪೊಲೀಸರು ಬಲ ಕಾಲುವೆ ತೆರೆದು ಗಂಟೆಗೆ 500 ಕ್ಯೂಸೆಕ್ ಕೃಷ್ಣಾ ನೀರನ್ನು ಬಿಡುಗಡೆ ಮಾಡಿದ್ದಾರೆ.
ನಾವು ಕುಡಿಯುವ ನೀರಿನ ಉದ್ದೇಶಕ್ಕಾಗಿ ಕೃಷ್ಣಾ ನದಿಯ ನಾಗಾರ್ಜುನಸಾಗರ ಬಲ ಕಾಲುವೆಯಿಂದ ನೀರು ಬಿಡುತ್ತಿದ್ದೇವೆ ಎಂದು ಆಂಧ್ರಪ್ರದೇಶ ರಾಜ್ಯದ ನೀರಾವರಿ ಸಚಿವ ಅಂಬಟಿ ರಾಮಬಾಬು ಎಕ್ಸ್ನಲ್ಲಿ ಪೋಸ್ಟ್ ಮಾಡಿದ್ದರು. ಆದರೆ ಆಂಧ್ರಪ್ರದೇಶ ಮತ್ತು ತೆಲಂಗಾಣ ನಡುವಿನ ಒಪ್ಪಂದದ ಪ್ರಕಾರ ರಾಜ್ಯಕ್ಕೆ ಸೇರಿದ ನೀರನ್ನು ಮಾತ್ರ ತೆಗೆದುಕೊಂಡಿದ್ದೇವೆ ಎಂದು ಸಚಿವರು ಸ್ಪಷ್ಟಪಡಿಸಿದ್ದಾರೆ. ನಾವು ಯಾವುದೇ ಒಪ್ಪಂದವನ್ನು ಉಲ್ಲಂಘಿಸಿಲ್ಲ.
MS Dhoni News car: 3.30 ಕೋಟಿಯ ಕಾರು ಖರೀದಿಸಿದ MS ಧೋನಿ: ಸೋಶಿಯಲ್ ಮೀಡಿಯಾದಲ್ಲಿ ಫುಲ್ ವೈರಲ್!
ಕೃಷ್ಣಾ ನೀರಿನಲ್ಲಿ 66% ಆಂಧ್ರಪ್ರದೇಶಕ್ಕೆ ಮತ್ತು 34% ಪಾಲು ತೆಲಂಗಾಣಕ್ಕೆ ಸೇರಿದೆ. ನಮಗೆ ಸೇರದ ಒಂದು ಹನಿ ನೀರನ್ನು ಸಹ ನಾವು ಬಳಸಿಲ್ಲ. ನಮ್ಮ ಸೀಮೆಯಲ್ಲಿ ನಮ್ಮ ಕಾಲುವೆಯನ್ನು ತೆರೆಯಲು ನಾವು ಪ್ರಯತ್ನಿಸಿದ್ದೇವೆ. ಈ ನೀರು ನಮ್ಮದು ಎಂದು ರಾಮಬಾಬು ತಿಳಿಸಿದ್ದಾರೆ. ಉದ್ವಿಗ್ನತೆ ಭುಗಿಲೆದ್ದಿರುವ ಹೊತ್ತಲ್ಲೇ ಕೇಂದ್ರವು ಮಧ್ಯಪ್ರವೇಶಿಸಿದೆ. ಹೆಚ್ಚಿನ ಘರ್ಷಣೆಯನ್ನು ತಪ್ಪಿಸಲು ಕೇಂದ್ರೀಯ ಮೀಸಲು ಪೊಲೀಸ್ ಪಡೆ (ಸಿಆರ್ಪಿಎಫ್) ಅಣೆಕಟ್ಟು ಮೇಲ್ವಿಚಾರಣೆ ಮಾಡುತ್ತಿದೆ. ಒಪ್ಪಂದದ ಪ್ರಕಾರ ಎರಡೂ ಕಡೆ ನೀರು ಪಡೆಯಲಾಗುತ್ತಿದೆಯೇ ಎಂದು ಮೇಲ್ವಿಚಾರಣೆ ನಡೆಸಿದೆ.