ಬೆಂಗಳೂರು:– ತಮಿಳುನಾಡಿನಲ್ಲಿ ಭಾರೀ ಮಳೆ ಹಿನ್ನೆಲೆ, ಚೆನ್ನೈನಲ್ಲಿ ಲ್ಯಾಂಡ್ ಆಗಬೇಕಿದ್ದ ವಿಮಾನ ಬೆಂಗಳೂರಿಗೆ ಡೈವರ್ಟ್ ಮಾಡಲಾಗಿದೆ.
ಚೆನ್ನೈ ವಿಮಾನ ನಿಲ್ಥಾಣದಲ್ಲಿ ಲ್ಯಾಂಡ್ ಆಗಬೇಕಿದ್ದ ವಿಮಾನಗಳನ್ನ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನದತ್ತ ಡೈವರ್ಟ್ ಮಾಡಲಾಗಿದೆ. ಕಳೆದ ರಾತ್ರಿಯಿಂದ ಈವರೆಗೂ 33 ವಿಮಾನಗಳನ್ನ ಬೆಂಗಳೂರಿನತ್ತ ಡೈವರ್ಟ್ ಮಾಡಲಾಗಿದೆ. ಎಮಿರೇಟ್ಸ್ , ಲೂಪ್ತಾನ್ಸ್, ಏರ್ ಇಂಡಿಯಾ ಏಕ್ಸ್ಪ್ರೆಸ್ ಸೇರಿದಂತೆ 33 ವಿಮಾನಗಳು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಲ್ಯಾಂಡ್ ಆಗಿವೆ.
ಮುಂಜಾನೆಯಿಂದಲೇ ವಿವಿಧ ರಾಜ್ಯಗಳಿಂದ, ವಿದೇಶಗಳಿಂದ ಬಂದ ಪ್ರಯಾಣಿಕರು ಏರ್ಪೋರ್ಟ್ನಲ್ಲಿ ಕಾಯುತ್ತಿದ್ದಾರೆ. ಮಳೆ ಕಡಿಮೆಯಾದ್ರೆ ಚೆನ್ನೈಗೆ ಹೋಗಲು ಕಾಯುತ್ತಿದ್ದಾರೆ. ಹವಾಮಾನ ವೈಪರೀತ್ಯ ಹಿನ್ನೆಲೆ ಬೆಂಗಳೂರಿನಿಂದ ತಿರುಪತಿ ಮತ್ತು ವಿಜಯವಾಡಗೆ ಹೋಗಬೇಕಿದ್ದ ವಿಮಾನಗಳು ರದ್ದಾಗುವ ಅಥವಾ ವಿಳಂಬವಾಗುವುದಾಗಿ ಬಿಐಎಎಲ್ ಅಧಿಕಾರಿಗಳು ತಿಳಿಸಿದ್ದಾರೆ.
ಚೆನ್ನೈ ಏರ್ಪೋರ್ಟ್ನ ರನ್ ವೇಯಲ್ಲಿ ನೀರು ನಿಂತ ಪರಿಣಾಮ ಸೋಮವಾರ ರಾತ್ರಿ 11 ಗಂಟೆವರೆಗೂ ವಿಮಾನಗಳ ಆಗಮನ ಮತ್ತು ನಿರ್ಗಮನ ರದ್ದು ಮಾಡಲಾಗಿದೆ. ಮಂಗಳವಾರವೂ ಸಹ ಮಳೆಯ ಆರ್ಭಟ ಹೆಚ್ಚಾಗುವ ಸಾಧ್ಯತೆ ಇರುವ ಬಗ್ಗೆ ಹವಾಮಾನ ಇಲಾಖೆ ತಿಳಿಸಿದ್ದು, ವಿಮಾನ ಹಾರಾಟದಲ್ಲಿ ಮತ್ತಷ್ಟು ವ್ಯತ್ಯಯವಾಗಲಿದೆ.