ಬೆಂಗಳೂರು:– ಉತ್ತರ ಕರ್ನಾಟಕಕ್ಕೆ ನ್ಯಾಯ ಸಿಗುವವರೆಗೆ ವಿಪಕ್ಷ ನಾಯಕನಿಗೆ ಶುಭ ಕೋರುವುದಿಲ್ಲ ಎಂದು ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ.
ಉತ್ತರ ಕರ್ನಾಟಕದ ಸ್ವಾಭಿಮಾನಕ್ಕೆ ಧಕ್ಕೆ ಆಗಿದೆ. ಅಲ್ಲಿಯತನಕ ನಾನು ಶುಭ ಕೋರುವುದಿಲ್ಲ ಎಂದು ಯತ್ನಾಳ್ ಹೇಳಿದರು. ನಿಮ್ಮ ಕೋಪ ಯಾರ ವಿರುದ್ಧವಾಗಿದೆ ಎಂಬ ಪ್ರಶ್ನೆಗೆ ಉತ್ತರಿಸಿದ ಯತ್ನಾಳ್, ನನ್ನ ಹೋರಾಟ ಉತ್ತರ ಕರ್ನಾಟಕದ ಪರವಾಗಿ ಎಂದರು.
ಪಿಸಿಐ ಪರೀಕ್ಷೆ ಮುಂದೂಡಿಕೆ ಮತ್ತು ಉತ್ತರ ಕರ್ನಾಟಕದ ಸಮಸ್ಯೆ ಬಗ್ಗೆ ಮಾತನಾಡಲು ಅಧ್ಯಕ್ಷರು ಅವಕಾಶ ಮಾಡಿಕೊಟ್ಟರು. ನನ್ನ ಹೋರಾಟಕ್ಕೆ ಎಲ್ಲರು ಮಣಿಯುತ್ತಾರೆ. ನಾನು ಎರಡು ಹೋರಾಟವನ್ನ ಗೆದ್ದಿದೇನೆ ಎಂದು ಯತ್ನಾಳ್ ಹೇಳಿದರು.
ಉತ್ತರ ಕರ್ನಾಟಕಕ್ಕೆ ನ್ಯಾಯ ಕೊಡುವವರೆಗೂ ಶಾಸಕಾಂಗ ಪಕ್ಷದ ಸಭೆಗೆ ಹೋಗುವುದಿಲ್ಲ ಎಂದಿದ್ದರು. ರಾಜ್ಯದ ಜನರ ದೃಷ್ಟಿಯಲ್ಲಿ ನಾನು ಎಲ್ಲಾ ರೀತಿಯ ರಾಜ್ಯಾಧ್ಯಕ್ಷ ಹಾಗೂ ವಿರೋಧ ಪಕ್ಷದ ನಾಯಕ ಆಗಲು ಸಮರ್ಥನಾಗಿದ್ದೇನೆ. ಉತ್ತರ ಕರ್ನಾಟಕ ಭಾಗಕ್ಕೆ ರಾಜ್ಯಾಧ್ಯಕ್ಷ ಮತ್ತು ವಿರೋಧ ಪಕ್ಷದ ನಾಯಕ ಸ್ಥಾನ ಸಿಗಲೇಬೇಕು. ಅದಕ್ಕೆ ನಾನು ಯಾರ ಮುಲಾಜಿಗೂ ಹೆದರುವುದಿಲ್ಲ ಎಂದಿದ್ದರು.
ಮುಖ್ಯಮಂತ್ರಿ ಹಳೆ ಮೈಸೂರು ಭಾಗ, ಉಪಮುಖ್ಯಮಂತ್ರಿಯ ಹಳೆ ಮೈಸೂರು ಭಾಗ, ವಿರೋಧ ಪಕ್ಷದ ನಾಯಕ ಹಳೆ ಮೈಸೂರು ಭಾಗ, ಬಿಜೆಪಿ ವಿರೋಧ ಪಕ್ಷದ ನಾಯಕ ಮತ್ತು ರಾಜ್ಯಾಧ್ಯಕ್ಷ ಹಳೆ ಮೈಸೂರು ಭಾಗ ಮತ್ತು ಬೆಂಗಳೂರಿನವರು. ಉತ್ತರ ಕರ್ನಾಟಕದವರು ಗಂಟೆ ಹೊಡಿಬೇಕಾ? ನಮಗೆ ನ್ಯಾಯ ಸಿಗುವವರೆಗೂ ಯಾವುದೇ ಹೋರಾಟಕ್ಕೂ ನಾನು ಸಿದ್ಧ. ಯಾವ ಸ್ಥಾನವನ್ನು ತ್ಯಾಗವನ್ನು ಬೇಕಾದರೂ ಮಾಡುತ್ತೇನೆ ಎಂದರು.