ಬೆಂಗಳೂರು:- ಡಿ.23ರಂದು ನಿಗದಿಯಾಗಿದ್ದ ಪಿಎಸ್ಐ ನೇಮಕಾತಿ ಮರು ಪರೀಕ್ಷೆ ಜ.23ಕ್ಕೆ ಮುಂದೂಡಿಕೆ ಮಾಡಲಾಗಿದೆ.
ಈ ಕುರಿತಾಗಿ ಮಾತನಾಡಿದ ಗೃಹ ಸಚಿವ ಡಾ. ಪರಮೇಶ್ವರ್, PSI ಪರೀಕ್ಷೆ ಸಮಯಾವಕಾಶ ಬೇಕು ಎಂದು ಪರೀಕ್ಷಾರ್ಥಿಗಳು ಮನವಿ ಮಾಡಿದ್ದರು. ಹಾಗಾಗಿ ಪರೀಕ್ಷೆಯನ್ನು ಒಂದು ತಿಂಗಳು ಮುಂದೂಡಿಕೆ ಮಾಡಲಾಗಿದೆ. ಸದನದಲ್ಲಿ ಯತ್ನಾಳ್ ಈ ವಿಚಾರವನ್ನ ಪ್ರಸ್ತಾಪ ಮಾಡಿದ್ದಾರೆ. ಅನೇಕ ಶಾಸಕರುಗಳು ಪಕ್ಷಾತೀತವಾಗಿ ಬೇಡಿಕೆಯನ್ನ ಇಟ್ಟಿದ್ದರು. ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಜೊತೆ ಸಭೆ ನಡೆಸಿ ಒಂದು ತಿಂಗಳ ಪರೀಕ್ಷೆಯನ್ನ ಮುಂದೂಡಿಕೆ ಮಾಡಲಾಗಿದೆ.
ದಿನಾಂಕವನ್ನ ಶೀಘ್ರದಲ್ಲೇ ಪ್ರಕಟಿಸಲಾಗುವುದು. KEA ಕ್ಯಾಲೆಂಡರ್ ನೋಡಿಕೊಂಡು ದಿನಾಂಕ ಪ್ರಕಟ ಮಾಡುತ್ತೇವೆ. 54 ಸಾವಿರ ಅಭ್ಯರ್ಥಿಗಳು ಪರೀಕ್ಷೆ ತಯಾರಿ ಮಾಡಿಕೊಂಡು ಬರೆಯಿರಿ ಎಂದು ಹೇಳಿದ್ದಾರೆ.