ದೊಡ್ಡಬಳ್ಳಾಪುರ:- ತಮಿಳುನಾಡಿನಲ್ಲಿ ಚಂಡ ಮಾರುತ ಎಫೆಕ್ಟ್ ಹಿನ್ನೆಲೆಯಲ್ಲಿ ತೆಂಗಿನ ಮರ ಧರೆಗುರುಳಿದೆ. ಬೆಂಗಳೂರು ಗ್ರಾ. ಜಿಲ್ಲೆ ದೊಡ್ಡಬಳ್ಳಾಪುರ ತಾಲೂಕಿನ ಬೈರಾಪುರ ತಾಂಡಾದಲ್ಲಿ ಘಟನೆ ನಡೆದಿದೆ.
ಮರ ಬಿದ್ದ ಕಾರಣ ನೆಲಕ್ಕೆ ಮನೆಯ ಗೋಡೆಗೆ ಹಾನಿಯಾಗಿದೆ. ನಾಲ್ಕು ವಿದ್ಯುತ್ ಕಂಬಗಳು ಕೂಡಾ ನೆಲಕ್ಕುರುಳಿವೆ. ಅದೃಷ್ಟವಶಾತ್ ಯಾರಿಗೂ ಯಾವುದೇ ಸಮಸ್ಯೆಯಾಗಿಲ್ಲ.
ಬೈಕ್ ನಲ್ಲಿ ತೆರಳುತ್ತಿದ್ದ ಯುವಕನಿಗೆ ಸಣ್ಣ ಪುಟ್ಟ ಗಾಯಗಳಾಗಿವೆ. ಕೂಡಲೇ ಸ್ಥಳೀಯರು ಬೆಸ್ಕಾಂ ಸಿಬ್ಬಂದಿಗೆ ಮಾಹಿತಿ ನೀಡಿ ಪವರ್ ಕಟ್ ಮಾಡಿಸಿದ್ದಾರೆ.