ಬಳ್ಳಾರಿ:- ಬೆಂಗಳೂರು ಸೇರಿದಂತೆ ಕರ್ನಾಟಕದ ಹಲವೆಡೆ ಇಂದು ಬೆಳ್ಳಂಬೆಳಗ್ಗೆ ಲೋಕಾಯುಕ್ತ ದಾಳಿ ನಡೆಸಿದೆ.
ಬಳ್ಳಾರಿ, ವಿಜಯನಗರ ಜಿಲ್ಲೆಯಲ್ಲಿ ಏಕಕಾಲಕ್ಕೆ ಲೋಕಯುಕ್ತ ದಾಳಿಯಾಗಿದೆ. ಬಳ್ಳಾರಿಯ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಚಂದ್ರಶೇಖರ, ಅರಣ್ಯ ಇಲಾಖೆಯ ಡಿಆರ್ ಎಫ್ ಓ ಮಾರುತಿ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಚಂದ್ರಶೇಖರ ಬಳ್ಳಾರಿಯಲ್ಲಿ ಕೆಲಸ ಮಾಡ್ತಿದ್ರು.. ಮನೆ ಮಾತ್ರ ಹೊಸಪೇಟೆಯಲ್ಲಿದೆ. ಇನ್ನು ಅರಣ್ಯ ಇಲಾಖೆಯ ಡಿಆರ್ ಎಫ್ ಓ ಮಾರುತಿ ಗಂಗಾವತಿಯಲ್ಲಿ ಕೆಲಸ ಮಾಡ್ತಿದ್ರು ಮನೆ ಕಂಪ್ಲಿಯಲ್ಲಿದೆ. ಹೀಗಾಗಿ ಚಂದ್ರಶೇಖರ ಅವರ ಹೊಸಪೇಟೆ ಮನೆ ಮತ್ತು ಮಾರುತಿ ಅವರ ಕಂಪ್ಲಿ ಮತ್ತು ಗಂಗಾವತಿ ನಿವಾಸದ ಮೇಲೆ ದಾಳಿ ಮಾಡಿದ್ದು, ದಾಖಲೆ ಪರಿಶೀಲಿಸುತ್ತಿದ್ದಾರೆ.
ಬೀದರ್ನಲ್ಲೂ ಸಹ ಬೆಳ್ಳಂಬೆಳಗ್ಗೆ ಲೋಕಾಯುಕ್ತ ದಾಳಿ ನಡೆಸಿದೆ. ಬೀದರ್ ನ ಪಶು ವೈಧ್ಯಕೀಯ ವಿಶ್ವವಿದ್ಯಾಲಯದ ನೌಕರರ ಸುನೀಲ್ ಕುಮಾರ್ ಮನೆ ಹಾಗೂ ಕಾಂಪ್ಲೆಕ್ಸ್ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದು, ದಾಖಲೆಗಳ ಪರಿಶೀಲನೆಯಲ್ಲಿ ತೊಡಗಿದ್ದಾರೆ.