ತುಮಕೂರು:-ಎರಡು ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಓರ್ವ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ತುಮಕೂರು ಜಿಲ್ಲೆ ಕುಣಿಗಲ್ ತಾಲೂಕಿನ ನಡೆ ಮಾವಿನಪುರ ಗ್ರಾಮದಲ್ಲಿ ಜರುಗಿದೆ.
ಮಹಮದ್ ಪೀರ್ 45 ಮೃತ ದುರ್ದೈವಿ ಎನ್ನಲಾಗಿದೆ. ಮತ್ತೋರ್ವ ಬೈಕ್ ಸವಾರನಿಗೆ ಗಂಭೀರ ಗಾಯವಾಗಿದ್ದು, ಬೆಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಕುಣಿಗಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಜರುಗಿದೆ.