ಬೆಳಗಾವಿ: ಶಾಸಕ ರಮೇಶ್ ಜಾರಕಿಹೊಳಿ ಆಪ್ತ, ಬಿಜೆಪಿ ಮುಖಂಡ ಪೃಥ್ವಿಸಿಂಗ್ಗೆ ಚಾಕು ಇರಿತ ಪ್ರಕರಣ ರಾಜಕೀಯ ಪ್ರೇರಿತವೋ ಅಥವಾ ಷಡ್ಯಂತ್ರವೋ ಗೊತ್ತಾಗಬೇಕು. ಪೃಥ್ವಿ ಸಿಂಗ್ ಮೋಸ್ಟ್ ಬೋಗಸ್ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಾಗ್ದಾಳಿ ಮಾಡಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾನು, ತಮ್ಮ, ಮಗ ಸೇರಿದಂತೆ ನಾವೆಲ್ಲರೂ ಶಾಂತಿ ಪ್ರಿಯರು. ತನಿಖೆ ಆಗಬೇಕು ಎಂದು ಎಸ್ಪಿ ಜೊತೆ ಮಾತನಾಡಿದ್ದೇನೆ.
Benefits Of Moringa Leaves: ನುಗ್ಗೆಕಾಯಿ ಮಾತ್ರವಲ್ಲ, ಸೊಪ್ಪಿನಲ್ಲೂ ಸಾಕಷ್ಟು ಔಷಧೀಯ ಗುಣಗಳು ಅಡಗಿವೆ..!
ಪ್ರಕರಣದ ಬಗ್ಗೆ 24 ಗಂಟೆಯೊಳಗೆ ಸತ್ಯಾಸತ್ಯತೆ ಗೊತ್ತಾಗಬೇಕು ಎಂದಿದ್ದಾರೆ. ಚಾಕು ಇರಿತದ ಹಿಂದೆ ಯಾರಿದ್ದಾರೆ ಎಂದು ಗೊತ್ತಾಗಬೇಕು. ಅವನು ಯಾರ ಆಪ್ತ ಅನ್ನೋದಕ್ಕಿಂತ ನಮ್ಮ ಹೆಸರು ಬಂದಿದೆ. ಬಗ್ಗೆ ವಿಚಾರ ಮಾಡಿದ್ದೇನೆ. ಬಿಜೆಪಿ ಮುಖಂಡ ಪೃಥ್ವಿ ಸಿಂಗ್ನನ್ನೇ ವಿಚಾರಣೆ ಮಾಡಬೇಕು. ಪೃಥ್ವಿ ಹೆಸರು ಬರೆದಿಟ್ಟು ಹುಡುಗರು ಆತ್ಮಹತ್ಯೆ ಮಾಡಿಕೊಂಡಿದ್ದರು ಎಂದು ಹೇಳಿದ್ದಾರೆ.