ಬೆಂಗಳೂರು:– ಹೈಕೋರ್ಟ್ ವಿಡಿಯೋ ಕಾನ್ಫರೆನ್ಸ್ ವೇಳೆ ಅಶ್ಲೀಲ ಚಿತ್ರ ಪ್ರದರ್ಶನ ಮಾಡಿದ ಅಪರಿಚಿತ ವ್ಯಕ್ತಿಗಳ ವಿರುದ್ಧ FIR ದಾಖಲಾಗಿದೆ.
ಕಲಾಪದ ಲಿಂಕ್ ಮೂಲಕ ಭಾಗವಹಿಸಿದ ಅಪರಿಚಿತರಿಂದ ಕೃತ್ಯವೆಸಗಲಾಗಿದೆ. ಕಂಪ್ಯೂಟರ್ ವಿಭಾಗದ ರಿಜಿಸ್ಟ್ರಾರ್ ಕಚೇರಿಯ ಎನ್. ಸುರೇಶ್ ಎಂಬುವವರಿಂದ ದೂರು ನೀಡಿದ್ದು, ನ್ಯಾಯಾಲಯದ ಕಲಾಪಕ್ಕೆ ಅಡ್ಡಿಪಡಿಸಿದ ಹಿನ್ನೆಲೆ ಐ.ಟಿ. ಕಾಯ್ದೆ ಸೆ. 67, 67(A) ಅಡಿ ಪ್ರಕರಣ ದಾಖಲು ಮಾಡಲಾಗಿದೆ.
ಅಶ್ಲೀಲ ಚಿತ್ರ ಪ್ರದರ್ಶಿಸಿ ಅನುಚಿತ ವರ್ತನೆ ತೋರಿದ್ದಾರೆ. ಹೈಕೋರ್ಟ್ನ ಸೈಬರ್ ಭದ್ರತೆಗೆ ಆತಂಕ ಎದುರಾದ ಹಿನ್ನೆಲೆ ತಾತ್ಕಾಲಿಕವಾಗಿ ಹೈಕೋರ್ಟ್ ವಿಡಿಯೋ ಕಾನ್ಫರೆನ್ಸ್ ಕಲಾಪ ಅಮಾನತು ಮಾಡಲಾಗಿದೆ.