ಬೆಳಗಾವಿ : ಬೆಳಗಾವಿ ಚಳಿಗಾಲದ ಅಧಿವೇಶನದ ಮೂರನೇ ದಿನವು ಪ್ರತಿಭಟನೆ ಕಾವು ತಟ್ಟಲಿದ್ದು, ಶಕ್ತಿಸೌಧದ ಹೊರಗೆ ಮೂರನೇ ದಿನವು ಸಾಲು ಸಾಲು ಪ್ರತಿಭಟನೆಗಳು ನಡೆಯಲಿದೆ. ಬೆಳಗಾವಿ ಚಳಿಗಾಲದ ಅಧಿವೇಶನ ಮೂರನೇ ದಿನವಾದ ಇಂದು ಬರೊಬ್ಬರಿ 6 ಸಂಘಟನೆಗಳಿಂದ ಪ್ರತಿಭಟನೆ, 2 ಸಂಘಟನೆಗಳಿಂದ ಸರ್ಕಾರಕ್ಕೆ ಮನವಿ ಸಲ್ಲಿಸಲಿದ್ದೇವೆ. ಅಖಿಲ ಕರ್ನಾಟಕ ರೈತ ಸಂಘದಿಂದ ಹೋರಾಟಕ್ಕೆ ಮುಂದಾಗಿದ್ದು,
ಬೆಂಗಳೂರಿನಲ್ಲಿ ನ್ಯಾಚುರಲ್ ಸ್ಟಾರ್… ‘ಹಾಯ್ ನಾನ್ನ’ ಪ್ರಮೋಷನ್ ನಲ್ಲಿ ನಾನಿ ಬ್ಯುಸಿ
ರಾಜ್ಯದ ರೈತರ ಸಾಲ ಮನ್ನಾ ಮಾಡಬೇಕು. ಕರೆಗಳ ಒತ್ತುವರಿ ತೆರುವು ಮಾಡಬೇಕು. ಖಾನಾಪುರ ತಾಲೂಕಿನ ರೈತರಿಗೆ ಮಲಪ್ರಭಾ ನದಿಯಿಂದ ಏತ ನೀರಾವರಿ ಯೋಜನೆ ಕಲ್ಪಿಸಲು ಒತ್ತಾಯಿಸಲಾಗುತ್ತದೆ. ಕರ್ನಾಟಕ ರಾಜ್ಯ ನೇಕಾರರ ಸಂಘದಿಂದ ರಾಜ್ಯದಲ್ಲಿ ಆತ್ಮಹತ್ಯೆ ಮಾಡಿಕೊಂಡ 46 ನೇಕಾರ ಕುಟುಂಬಗಳಿಗೆ 10 ಲಕ್ಷ ಪರಿಹಾರ ಕೊಡಬೇಕು, ನೇಕಾರರಿಗೂ ಕಟ್ಟಡ ಕಾರ್ಮಿಕರ ಮಾದರಿಯಲ್ಲಿ ಕಾರ್ಮಿಕ ಸೌಲಭ್ಯ ಒದಗಿಸಲು ಪ್ರತಿಭಟನೆಗೆ ಮುಂದಾಗಿದ್ದಾರೆ.