ಬೆಂಗಳೂರು: ನಂದಿ ಗಿರಿಧಾಮಕ್ಕೆ ಡಿಸೆಂಬರ್ 11 ರಿಂದ ವಿದ್ಯುತ್ ರೈಲು ಆರಂಭಿಸಲು ನೈಋತ್ಯ ರೈಲ್ವೆ ನಿರ್ಧರಿಸಿದೆ. ದೇವನಹಳ್ಳಿಯಿಂದ ಚಿಕ್ಕಬಳ್ಳಾಪುರಕ್ಕೆ ವಿಮಾನ ನಿಲ್ದಾಣ ಮಾರ್ಗದಲ್ಲಿ ಕಾರ್ಯನಿರ್ವ ಹಿಸುವ ಮೇನ್ಲೈನ್ ಎಲೆಕ್ಟ್ರಿಕ್ ಮಲ್ಟಿಪಲ್ ಯುನಿಟ್ ರೈಲುಗಳನ್ನು ವಿಸ್ತರಿಸಲು ನಿರ್ಧರಿಸಲಾಗಿದೆ. 06531/06532 ಬೆಂಗಳೂರು ಕಂಟೋನ್ಮೆಂಟ್-ಚಿಕ್ಕಬಳ್ಳಾಪುರ-ಕಂಟೋನ್ಮೆಂಟ್, 06535/06583 ಬೆಂಗಳೂರು ಕಂಟೋನ್ಮೆಂಟ್-ಚಿಕ್ಕಬಳ್ಳಾಪುರ, ಮತ್ತು 06593/06594 ಯಶವಂತಪುರ-ಚಿಕ್ಕಬಳ್ಳಾಪುರ-ಯಶವಂತಪುರ ರೈಲುಗಳು ಸಂಚರಿಸಲಿವೆ.
ಬೆಂಗಳೂರಿನಲ್ಲಿ ನ್ಯಾಚುರಲ್ ಸ್ಟಾರ್… ‘ಹಾಯ್ ನಾನ್ನ’ ಪ್ರಮೋಷನ್ ನಲ್ಲಿ ನಾನಿ ಬ್ಯುಸಿ
ಯಲಹಂಕ ಮತ್ತು ಚಿಕ್ಕಬಳ್ಳಾಪುರ ನಡುವಿನ ವಿದ್ಯುದ್ದೀಕರಣವು ಮಾರ್ಚ್ 2022 ರಲ್ಲಿ ಪೂರ್ಣಗೊಂಡಿತು, ಆದರೆ ಈ ಮಾರ್ಗದಲ್ಲಿ ವಿದ್ಯುತ್ ರೈಲುಗಳ ಸಂಚಾರವನ್ನು ನೈಋತ್ಯ ರೈಲ್ವೆ ಹಲವು ಕಾರಣಗಳಿಂದ ವಿಳಂಬ ಮಾಡಿದೆ. ಪ್ರಸ್ತುತ, 06387/06388 ಕೆಎಸ್ಆರ್ ಬೆಂಗಳೂರು-ಕೋಲಾರ-ಕಂಟೋನ್ಮೆಂಟ್ ಡೀಸೆಲ್ ಮಲ್ಟಿಪಲ್ ಯುನಿಟ್ ಮತ್ತು 16549/16550 ಕೆಎಸ್ಆರ್ ಬೆಂಗಳೂರು – ಕೋಲಾರ- ಕೆಎಸ್ಆರ್ ಬೆಂಗಳೂರು ರೈಲುಗಳು ನಂದಿ ನಿಲ್ದಾಣದಲ್ಲಿ ನಿಲುಗಡೆ ಮಾಡುತ್ತವೆ.
ನಂದಿ ನಿಲ್ದಾಣದಿಂದ ನಂದಿ ಬೆಟ್ಟದ ತಪ್ಪಲಿನಲ್ಲಿರುವ ಭೋಗನಂದೀಶ್ವರ ದೇವಸ್ಥಾನಕ್ಕೆ ಸುಮಾರು 1.4 ಕಿ.ಮೀ ದೂರವಿದೆ. ಹೆಚ್ಚುವರಿ 15-18 ಕಿಮೀ. ಕ್ರಮಿಸಬೇಕಾಗುತ್ತದೆ. ನಂದಿ ರೈಲು ನಿಲ್ದಾಣದಿಂದ ಈ ಸ್ಥಳಗಳಿಗೆ ಬಹು-ಮಾದರಿ ಸಾರ್ವಜನಿಕ ಅಥವಾ ಸಾಮಾನ್ಯ ಸಾರಿಗೆ (ಬಸ್ಸುಗಳು, ಆಟೋಗಳು, ಇತ್ಯಾದಿ) ಕಡಿಮೆ ಇದ್ದು ಪ್ರವಾಸಿಗೆರಿಗೆ ಹೆಚ್ಚು ಅನುಕೂಲವಾಗುವುದಿಲ್ಲ ಎನ್ನಲಾಗಿದೆ. ಪ್ರಯಾಣದ ಸಮಯವನ್ನು ಕಡಿಮೆ ಮಾಡಲು ನೈಋತ್ಯ ರೈಲ್ವೆ ಇಲಾಖೆ ಸಲಹೆ ನೀಡಿದ್ದಾರೆ.