ಲಕ್ನೋ: ವೈದ್ಯನೊಬ್ಬ (Doctor) ತನ್ನ ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಕೊಂದು ತಾನು ಕೂಡಾ ಆತ್ಮಹತ್ಯೆಗೆ (Suicide) ಶರಣಾಗಿರುವ ಆಘಾತಕಾರಿ ಘಟನೆ ಉತ್ತರ ಪ್ರದೇಶದ (Uttar Pradesh) ರಾಯ್ಬರೇಲಿಯಲ್ಲಿ (Rae Bareli) ನಡೆದಿದೆ. ತಡರಾತ್ರಿ ಈ ಘಟನೆ ವರದಿಯಾಗಿದೆ. ಆತ್ಮಹತ್ಯೆ ಮಾಡಿಕೊಂಡ ವೈದ್ಯನನ್ನು ಅರುಣ್ ಕುಮಾರ್ ಸಿಂಗ್ (45) ಎಂದು ಗುರುತಿಸಲಾಗಿದೆ. ಮಾಡರ್ನ್ ರೈಲ್ ಕೋಚ್ ಫ್ಯಾಕ್ಟರಿ ಆಸ್ಪತ್ರೆಯ ನೇತ್ರ ತಜ್ಞನಾಗಿದ್ದ ಸಿಂಗ್ಗೆ ತನ್ನ ಕುಟುಂಬದವರು ಹಾಗೂ ಸಹೋದ್ಯೋಗಿಗಳು ಕರೆ ಮಾಡಿದ್ದರು.
ಬೆಂಗಳೂರಿನಲ್ಲಿ ನ್ಯಾಚುರಲ್ ಸ್ಟಾರ್… ‘ಹಾಯ್ ನಾನ್ನ’ ಪ್ರಮೋಷನ್ ನಲ್ಲಿ ನಾನಿ ಬ್ಯುಸಿ
ಕರೆಯನ್ನು ಸ್ವೀಕರಿಸದೇ ಹೋದಾಗ ಆಸ್ಪತ್ರೆಯ ಸಂಕೀರ್ಣದ ಒಳಗೆಯೇ ಇರುವ ಮನೆಯನ್ನು ಪರಿಶೀಲಿಸಿದ್ದಾರೆ. ಈ ವೇಳೆ ಘಟನೆ ಬೆಳಕಿಗೆ ಬಂದಿದೆ. ಮನೆಯ ಬಾಗಿಲನ್ನು ತೆರೆದಾಗ ಅರುಣ್ ಪತ್ನಿ ಅರ್ಚನಾ (40) ಮಕ್ಕಳಾದ ಅರಿಬಾ (12) ಹಾಗೂ ಆರವ್ (4) ಶವವಾಗಿ ಪತ್ತೆಯಾಗಿದ್ದಾರೆ. ಸಿಂಗ್ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ. ಸಿಂಗ್ ಮಕ್ಕಳಿಗೆ ಚುಚ್ಚು ಮದ್ದು ನೀಡಿ, ಅವರನ್ನು ಪ್ರಜ್ಞಾಹೀನರನ್ನಾಗಿ ಮಾಡಿ ಬಳಿಕ ಕೊಂದಿದ್ದಾನೆ. ಅವರಿಬ್ಬರ ತಲೆಯಲ್ಲಿ ಬಲವಾಗಿ ಹೊಡೆದಿರುವ ಗಾಯಗಳಾಗಿವೆ. ನಂತರ ಆತ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂಬುದು ಮೇಲ್ನೋಟಕ್ಕೆ ತಿಳಿದುಬಂದಿರುವುದಾಗಿ ಪೊಲೀಸರು ತಿಳಿಸಿದ್ದಾರೆ.