ತಮಿಳುನಾಡು:- ರಾಜ್ಯ ಗಡಿಭಾಗ ತಮಿಳುನಾಡಿನ ಹೊಸೂರು – ಬಾಗಲೂರು ರಸ್ತೆಯ ಜೀಮಂಗಲಂ ಬಳಿ ಸರ್ಕಾರಿ ಬಸ್ ಹಾಗೂ ಶಾಲಾ ಬಸ್ ನಡುವೆ ಭೀಕರ ಅಪಘಾತ ಸಂಭವಿಸಿದೆ. ಬಸ್ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿದೆ. ಪರಿಣಾಮ ಎರಡು ಬಸ್ಗಳ ಮುಂಭಾಗ ಛಿದ್ರಗೊಂಡಿದೆ.
ಶಾಲಾ ಬಸ್ ಚಾಲಕನಿಗೆ ಗಂಭೀರ ಗಾಯವಾಗಿದರೆ, ಸರ್ಕಾರಿ ಬಸ್ನಲ್ಲಿದ್ದ ಓರ್ವ ಬಾಲಕಿಯ ಸ್ಥಿತಿ ಚಿಂತಾಜನಕವಾಗಿದೆ. ಇಬ್ಬರನ್ನು ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಶಾಲಾ ಮಕ್ಕಳಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಇತ್ತ ಬಸ್ನಲ್ಲಿ ಸಿಲುಕಿಕೊಂಡಿರುವ ಗಾಯಾಳುಗಳನ್ನು ಸ್ಥಳೀಯರು ಹೊರತೆಗೆಯುತ್ತಿದ್ದಾರೆ.