ಬೆಳಗಾವಿ:- ರಾಜ್ಯ ಸರ್ಕಾರಕ್ಕೆ ರೈತರ ಬಗ್ಗೆ ಕಾಳಜಿ ಇಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜೇಯೇಂದ್ರ ಹೇಳಿದ್ದಾರೆ
ನಗರದ ಖಾಸಗಿ ಹೊಟೇಲ್ನಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಭೀಕರ ಬರಗಾಲದ ಪರಿಸ್ಥಿತಿ ಎದುರಾಗಿದೆ. ಇಂತಹ ಸಂದರ್ಭದಲ್ಲಿ ಸರ್ಕಾರಕ್ಕೆ ರೈತರ ಬಗ್ಗೆ ಯಾವುದೇ ಕಾಳಜಿ ಹೊಂದಿಲ್ಲ. ರೈತರಿಗೆ ಪರಿಹಾರ ಕೊಡುವ ಕಳಕಳಿ ಇಲ್ಲ.
ರೈತರಿಗೆ ಪರಿಹಾರ ಕೊಡಲು ಖಜಾನೆಯಲ್ಲಿ ಹಣ ಇಲ್ಲದಿದ್ದರೂ ಅಲ್ಪಸಂಖ್ಯಾತರಿಗೆ ಹಣ ಕೊಡ್ತೀನಿ ಅಂತ ಹೇಳ್ತಾರೆ.
ರಾಜ್ಯ ಸರ್ಕಾರದ ಆಧ್ಯತೆ ಸಂಕಷ್ಟದಲ್ಲಿರುವ ರೈತರಲ್ಲ. ರೈತರ ಸಮಸ್ಯೆಗಳಿಗೆ ರಾಜ್ಯ ಸರ್ಕಾರ ಸ್ಪಂದನೆ ಮಾಡ್ತಿಲ್ಲ. ಕಾಂಗ್ರೆಸ್ ಸರ್ಕಾರ ಅಲ್ಪಸಂಖ್ಯಾತರ ಒಲೈಕೆ ಮಾಡ್ತಿದೆ ಎಂದರು.
ಇನ್ನೂ ಅಧಿವೇಶನ ಸಂದರ್ಭದಲ್ಲೊ ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವ ವಿಚಾರವಾಗಿ ಮಾತನಾಡಿ, ಕಾಂಗ್ರೆಸ್ ಸರ್ಕಾರಕ್ಕೆ ರೈತರ ಬಗ್ಗೆ ಕವಡೆ ಕಾಸಿನ ಕಿಮ್ಮತ್ತಿಲ್ಲ.
ಇಂದು ಸದನದಲ್ಲಿ ಈ ಬಗ್ಗೆ ಪ್ರಶ್ನೆ ಮಾಡ್ತೀನಿ ಎಂದರು. ಪೃಥ್ವಿ ಸಿಂಗ್ ಮೇಲೆ ಹಲ್ಲೆ ವಿಚಾರವಾಗಿ ಮಾತನಾಡಿ, ಬಿಜೆಪಿಯ ದಲಿತ ಮುಖಂಡನ ಮೇಲೆ ಮಾರಣಾಂತಿಕವಾಗಿ ಹಲ್ಲೆ ಆಗಿದೆ. ಪೊಲೀಸ್ ಅಧಿಕಾರಿಗಳು ಜಸ್ಟ್ ಕೇಸ್ ಮಾತ್ರ ದಾಖಲು ಮಾಡಿದ್ದಾರೆ.
ಅಟೆಮ್ಟ್ ಟೂ ಮರ್ಡರ್ ಕೇಸ್ ಹಾಕೋದಿಲ್ಲ, 307 ಕೇಸ್ ಹಾಕೋದಿಲ್ಲ. ಅದರ ಬದಲು ಕಾಂಗ್ರೆಸ್ ಎಂಎಲ್ಸಿ ಮೇಲೆ ಎ1 ಮಾಡಿದ್ದಾರೆ. ಪೊಲೀಸರ ಮೇಲೆ ನನಗೆ ನಂಬಿಕೆ ಇಲ್ಲ ಎಂದರು.