ಬೆಂಗಳೂರು:- ಮಾದಕ ವಸ್ತು ಮಾರಾಟ ಮಾಡುತ್ತಿದ್ದ ವಿದೇಶಿ ಪ್ರಜೆಯನ್ನು ಬಂಧಿಸಲಾಗಿದೆ. ಬಂಧಿತನಿಂದ ಸುಮಾರು ₹ 5 ಲಕ್ಷ ಮೌಲ್ಯದ ಮಾದಕ ವಸ್ತು ವಶಕ್ಕೆ ಪಡೆಯಲಾಗಿದೆ.
ಆರೋಪಿಯು, ವಡೇರಹಳ್ಳಿಯಲ್ಲಿ ಬಾಡಿಗೆ ಮನೆಯೊಂದರಲ್ಲಿ ವಾಸವಿದ್ದ. ಈತ ವಿದ್ಯಾರ್ಥಿಗಳು ಹಾಗೂ ಸ್ಥಳೀಯರನ್ನು ಗುರಿಯಾಗಿರಿಸಿಕೊಂಡು ಡ್ರಗ್ ಮಾರಾಟ ಮಾಡುತ್ತಿದ್ದ. ಈ ಸಂಬಂಧ ಖಚಿತ ಮಾಹಿತಿ ಆಧರಿಸಿ ದಾಳಿ ನಡೆಸಿದ ಪೊಲೀಸರು ಆರೋಪಿಯನ್ನು ಅರೆಸ್ಟ್ ಮಾಡಿದ್ದಾರೆ.
ಆರೋಪಿ ವಿರುದ್ಧ ಎಸ್.ಡಿ.ಪಿ.ಎಸ್ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಾಗಿದ್ದು, ಬಂಧಿತನಿಂದ 23 ಗ್ರಾಂ ಕೊಕೇನ್, 238 ಗ್ರಾಂ ಕೊಕೇನ್ ಮಾದರಿಯ ಸಿಂಥೆಟಿಕ್ ಡ್ರಗ್, 57 ಸಾವಿರ ನಗದು,2 ಮೊಬೈಲ್ ಸೀಜ್ ಮಾಡಲಾಗಿದೆ.
ವಿದ್ಯಾರಣ್ಯಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.