ಕೂದಲಿ ಅಂದಕ್ಕೆ ಬಳಸುವ ಶಾಂಪೂ ಸೇರಿದಂತೆ ಹೇರ್ಕೇರ್ ಉತ್ಪನ್ನಗಳು ನಿಮ್ಮ ಆರೋಗ್ಯವನ್ನೇ ಕೆಡಿಸಬಹುದು.
ಶಾಂಪೂಗಳ ಬಳಕೆ ಮಾರಣಾಂತಿಕ ಕಾಯಿಲೆಗೆ ದಾರಿ ಮಾಡಿಕೊಡಬಹುದು.
ಭಾರತದಲ್ಲಿ ವೇಗವಾಗಿ ಬೆಳೆಯುತ್ತಿರುವ ಕೈಗಾರಿಕೆಗಳಲ್ಲಿ ಒಂದಾದ ಕಾಸ್ಮೆಟಿಕ್ ಉದ್ಯಮವು ಪ್ರತಿ ವರ್ಷ 6%ರಷ್ಟು ಹೆಚ್ಚಾಗುತ್ತಿರುತ್ತದೆ. ಬಳಕೆದಾರರ ಸಂಖ್ಯೆ ಹೆಚ್ಚಾಗುತ್ತಿದ್ದಂತೆ ದಿನಕ್ಕೊಂದು ಬ್ರಾಂಡ್ಗಳು ಮಾರುಕಟ್ಟೆಗೆ ಬರುತ್ತದೆ. ಹೇರ್ ಕೇರ್ ವಸ್ತುಗಳ ತಯಾರಿಕಾ ಉದ್ಯಮವು ಕೂಡ ಹೀಗೆ. ವರ್ಷದಿಂದ ವರ್ಷಕ್ಕೆ ಹೆಚ್ಚಾಗುತ್ತಿದ್ದು, ಬಳಕೆದಾರರ ಸಂಖ್ಯೆಯೂ ಕೂಡ ಗಣನೀಯವಾಗಿ ಹೆಚ್ಚಾಗುತ್ತಿದೆ. ಆದರೆ ಇತ್ತೀಚಿಗೆ ವಿಜ್ಞಾನಿಗಳ ಅಧ್ಯಯನವೊಂದು ಆಘಾತಕಾರಿ ವಿಚಾರವನ್ನು ಬಹಿರಂಗಪಡಿಸಿದೆ.
ಮಾರುಕಟ್ಟೆಯಲ್ಲಿ ಲಭ್ಯವಿರುವ ಹೆಚ್ಚಿನ ಶ್ಯಾಂಪೂಗಳು ಹಾಗೂ ಹೇರ್ಕೇರ್ ಉತ್ಪನ್ನಗಳು ಕೂದಲನ್ನು ಸ್ವಚ್ಛಗೊಳಿಸುವ ಜೊತೆಗೆ ಅದರಲ್ಲಿನ ಬೃಹತ್ ಪ್ರಮಾಣದ ರಾಸಾಯನಿಕವು ನಮ್ಮ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ ಎಂದು ಸಂಶೋಧಕರು ಹೇಳುತ್ತಾರೆ.
ಎನ್ವಿರಾನ್ಮೆಂಟಲ್ ಸೈನ್ಸ್ & ಟೆಕ್ನಾಲಜಿ ಜರ್ನಲ್ನಲ್ಲಿ ಪ್ರಕಟವಾದ ಅಧ್ಯಯನದ ಪ್ರಕಾರ, ಕೂದಲ ರಕ್ಷಣೆಯ ಉತ್ಪನ್ನಗಳಲ್ಲಿನ ರಾಸಾಯನಿಕಗಳು ನಮ್ಮ ಕೂದಲಲ್ಲಿ ಹಾಗೂ ಸುತ್ತಲಿನ ಪ್ರದೇಶದಲ್ಲಿ ಅತ್ಯಕ್ಕಿಂತ ಹೆಚ್ಚು ಕಾಲ ಉಳಿಯುತ್ತದೆ. ಇದನ್ನು ಉಸಿರಾಡುವುದರಿಂದ ಶ್ವಾಸಕೋಶ ಹಾಗೂ ನರಮಂಡಲದ ಮೇಲೆ ಅತಿಯಾದ ಪರಿಣಾಮ ಬೀರುತ್ತದೆ. ಇಷ್ಟೇ ಅಲ್ಲ ಲಿವರ್ ಡ್ಯಾಮೇಜ್ ಆಗುವ ಸಾಧ್ಯತೆ ಕೂಡ ಹೆಚ್ಚಾಗಿದೆ ಎಂದು ತಿಳಿದು ಬಂದಿದೆ.
ಯುನೈಟೆಡ್ ಸ್ಟೇಟ್ಸ್ನ ಪರ್ಡ್ಯೂ ವಿಶ್ವವಿದ್ಯಾನಿಲಯದ ಸಂಶೋಧಕರ ಪ್ರಕಾರ, ಒಬ್ಬ ವ್ಯಕ್ತಿಯು ಮನೆಯಲ್ಲಿ ಒಂದು ಬಾರಿ ಕೂದಲ ರಕ್ಷಣೆಯ ಉತ್ಪನ್ನಗಳ ಬಳಕೆಯಿಂದ 17 ಮಿಗ್ರಾಂ ಹಾನಿಕಾರಕ ರಾಸಾಯನಿಕಗಳನ್ನು ಉಸಿರಾಡುತ್ತಾನೆ. ಕೂದಲ ರಕ್ಷಣೆಯ ಉತ್ಪನ್ನಗಳಲ್ಲಿ ಹೆಚ್ಚಿನವು ಪರಿಮಳಯುಕ್ತವಾಗಿರುತ್ತವೆ. ಈ ಪರಿಮಳ ಬರಲು ಬಳಸುವ ಕೆಲವು ರಾಸಾಯನಿಕಗಳು ಉಸಿರಾಡಲು ಅಪಾಯಕಾರಿಯಾಗಿದೆ. ಈ ಉತ್ಪನ್ನಗಳಲ್ಲಿ ಬಳಸುವ ರಾಸಾಯನಿಕಗಳು ನಾವು ತಿಳಿದಿರುವುದಕ್ಕಿಂತ ಹೆಚ್ಚು ಮಾನವನ ದೇಹಗಳ ಮೇಲೆ ಆತಂಕಕಾರಿಯಾಗಿದೆ.