ಬೆಂಗಳೂರು:- ಇಂದಿನಿಂದ ಎರಡು ದಿನ ರಾಜ್ಯದ ಹಲವೆಡೆ ವ್ಯಾಪಕ ಮಳೆ ಆಗಲಿದೆ ಎಂದು ಭಾರತೀಯ ಹವಮಾನ ಇಲಾಖೆ ಮಾಹಿತಿ ನೀಡಿದೆ.
ರಾಜ್ಯದ ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಕೋಲಾರ, ಬೆಂಗಳೂರು ಗ್ರಾಮಾಂತರ, ತುಮಕೂರು, ರಾಮನಗರ, ಮಂಡ್ಯ, ಮೈಸೂರು, ಚಾಮರಾಜನಗರ ಜಿಲ್ಲೆಗಳಲ್ಲಿ ಚದುರಿದಂತೆ ಉತ್ತಮ ಮಳೆಯಾಗುವ ಸಾಧ್ಯತೆ ಇದೆ. ಚಿಕ್ಕಬಳ್ಳಾಪುರ, ಚಿತ್ರದುರ್ಗ, ಹಾಸನ, ಕೊಡಗು, ಚಿಕ್ಕಮಗಳೂರು, ದಾವಣಗೆರೆ, ಶಿವಮೊಗ್ಗ ಜಿಲ್ಲೆಗಳಲ್ಲಿ ಚದುರಿದಂತೆ ಹಗುರ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ವರದಿಯಲ್ಲಿ ತಿಳಿಸಿದೆ. ಉತ್ತರ ಕರ್ನಾಟಕ ಮತ್ತು ಕರಾವಳಿ ಭಾಗದಲ್ಲಿ ಒಣಹವೆ ಇರಲಿದೆ ಎಂದು ಹೇಳಿದೆ.
ಡಿಸೆಂಬರ್ 13ರ ಬಳಿಕ ರಾಜ್ಯದಲ್ಲಿ ಮಳೆ ಸಂಪೂರ್ಣವಾಗಿ ಕಡಿಮೆಯಾಗಲಿದ್ದು ಶುಷ್ಕ ವಾತಾವರಣ ಇರಲಿದೆ ಎಂದು ನಿರೀಕ್ಷೆ ಮಾಡಲಾಗಿದೆ. ರಾಜ್ಯದಲ್ಲಿ ಈಗಾಗಲೇ ಚಳಿಗಾಲ ಶುರುವಾಗಿದ್ದು, ಮುಂದಿನ ದಿನಗಳಲ್ಲಿ ಚಳಿಯ ಪ್ರಮಾಣ ಹೆಚ್ಚಾಗುವ ಸಾಧ್ಯತೆ ಇದೆ.
ಬೆಂಗಳೂರಿನಲ್ಲಿ ವಾರಾಂತ್ಯದಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು ಮಳೆ ಸಾಧ್ಯತೆ ಕಡಿಮೆ ಇರಲಿದೆ. ಅಲ್ಲಲ್ಲಿ ಚದುರಿದಂತೆ ಹಗುರ ಮಳೆಯಾದರೂ ನಗರದ ಬಹುತೇಕ ಭಾಗಗಳಲ್ಲಿ ಶುಷ್ಕ ವಾತಾವರಣ ಇರಲಿದೆ.