ಚಾಮರಾಜನಗರ:; ಜಿಲ್ಲೆಯ ಕೊಳ್ಳೇಗಾಲದಲ್ಲಿ ಅಕ್ರಮ ಒಣ ಗಾಂಜಾ ಸಾಗಾಣೆ ಮಾಡುತ್ತಿದ್ದ ಓರ್ವ ಆರೋಪಿಯನ್ನು ಅರೆಸ್ಟ್ ಮಾಡಲಾಗಿದೆ.
ಕೊಳ್ಳೇಗಾಲ ತಾಲೂಕಿನ ಸತ್ತೇಗಾಲ ಹ್ಯಾಂಡ್ ಪೋಸ್ಟ್ ಬಳಿ ಆರೋಪಿಯನ್ನು ಬಂಧಿಸಲಾಗಿದೆ. ಬೈಕ್ ನಲ್ಲಿ ಅಕ್ರಮವಾಗಿ ಒಣಗಾಂಜಾ ಸಾಗಾಣೆ ಮಾಡುತ್ತಿದ್ದ ವ್ಯಕ್ತಿಯನ್ನು ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ. ಅಲ್ಲದೇ ಒಣ ಗಾಂಜಾವನ್ನು ಜಪ್ತಿ ಮಾಡಿದ್ದಾರೆ.
ಪಟ್ಟಣದ ಆಶ್ರಯ ಬಡಾವಣೆ ವಾಹೀದ್ ಪಾಷ ಅಲಿಯಾಸ್ ಸುಲ್ತಾನ್ (27) ಬಂಧಿತ ಆರೋಪಿ. ಆರೋಪಿಯಿಂದ ಸುಮಾರು 5 ಕೆ.ಜಿ. 480 ಗ್ರಾಂ ತೂಕದ 4 ಲಕ್ಷ ಬೆಲೆ ಬಾಳುವ ಒಣ ಗಾಂಜಾವನ್ನು ಹಾಗೂ ಒಂದು ಬೈಕ್ ಜಪ್ತಿಮಾಡಿದ್ದಾರೆ.
ಈತ ತನ್ನ ಬೈಕ್ನಲ್ಲಿ ಅಕ್ರಮವಾಗಿ ಒಣ ಗಾಂಜಾವನ್ನು ಮಾರಾಟ ಮಾಡಲು ಮಳವಳ್ಳಿ ಕಡೆಯಿಂದ ಕೊಳ್ಳೇಗಾಲಕ್ಕೆ ತೆಗೆದುಕೊಂಡು ಬರುತ್ತಿದ್ದ. ಖಚಿತ ಮಾಹಿತಿ ಮೇರೆಗೆ ಗ್ರಾಮಾಂತರ ಪೊಲೀಸ್ ಠಾಣೆಯ ಎಸ್ಐ ಗಣೇಶ್ ಮತ್ತು ತನಿಖಾ ಪಿಎಸ್ಐ ಚಲುವರಾಜು ಹಾಗೂ ಸಿಬ್ಬಂದಿ ತಂಡದೊಂದಿಗೆ ಸತ್ತೇಗಾಲ ಹ್ಯಾಂಡ್ ಪೋಸ್ಟ್ ಸೇತುವೆ ಬಳಿ ದಾಳಿ ನಡೆಸಿ ಆರೋಪಿಯನ್ನು ಮಾಲ್ ಸಮೇತ ಬಂಧಿಸಿದ್ದಾರೆ.
ಕಾರ್ಯಾಚರಣೆಯಲ್ಲಿ ಉಪವಿಭಾಗ ಅಪರಾಧ ಪತ್ತೆ ದಳದ ಸಿಬ್ಬಂದಿಎಎಸ್ಐ ತಖೀಉಲ್ಲಾ, ಮುಖ್ಯಪೇದೆ ಕಿಶೋರ್, ವೆಂಕಟೇಶ್, ಮಹದೇವಪ್ಪ, ಪೇದೆಗಳಾದ ಶಿವಕುಮಾರ್, ಬಿಳಿಗೌಡ, ಚಂದ್ರು ಇದ್ದರು.