ಲೀಲಾವತಿ (Leelavati) ಅವರು ಬಹಳಷ್ಟು ವರ್ಷಗಳ ಕಾಲ ಸಿನಿಮಾ ರಂಗದಲ್ಲಿ ನಿರ್ಮಾಪಕಿಯಾಗಿ, ನಟಿಯಾಗಿ ಸಾಕಷ್ಟು ಕೆಲಸ ಮಾಡಿದ್ದಾರೆ. ಸಣ್ಣ ವಯಸ್ಸಿನಲ್ಲೇ ಸಿನಿಮಾಗೆ ಬಂದವರು ಲೀಲಾವತಿ ಅವರು. ಆನಂತರ ದೊಡ್ಡ ರೀತಿಯಲ್ಲಿ ನಾಯಕಿ ನಟಿಯಾಗಿ ಬೆಳೆದರು. ಸಾಕಷ್ಟು ಸಿನಿಮಾಗಳನ್ನು ಕೊಟ್ಟವರು. ಅಂತಹ ಕಲಾವಿದರು ನಮ್ಮೊಂದಿಗೆ ಇದ್ದರು ಎನ್ನೋದೇ ಹೆಮ್ಮೆ ಅನಿಸುತ್ತಿದೆ ಎನ್ನುವುದು ನಟಿ ಉಮಾಶ್ರೀ (Umashree) ಮಾತು.
ಲೀಲಾವತಿ ಅವರದ್ದು ಮಾದರಿ ಜೀವನ. ಆ ತಾಯಿ ಸಾಕಷ್ಟು ಕಷ್ಟ ಪಟ್ಟಿದ್ಧಾರೆ. ಸನ್ಮಾನ, ಅವಮಾನ ಎರಡನ್ನೂ ಪಡೆದಿದ್ದಾರೆ. ತಾಯಿ ಮತ್ತು ಮಗನ ಬಾಂಧವ್ಯಕ್ಕೆ ಮಾದರಿ ಆದಂತಹ ಜೀವವದು. ಈಗ ತಾಯಿ ಮಗ ದೂರವಾಗಿದ್ದು ನೋವು ತಂದಿದೆ. ಅವರು ಇಲ್ಲ ಅನ್ನೋದು ನಂಬೋಕೆ ಆಗ್ತಿಲ್ಲ. ಮಹಿಳೆಯಾಗಿ ಸಮಾಜಕ್ಕೆ ಸಾಕಷ್ಟು ಕೊಡುಗೆ ಕೊಟ್ಟಿದ್ದಾರೆ ಲೀಲಮ್ಮ. ಅವರ ಹಾಕಿಟ್ಟ ದಾರಿ ನಮಗೆಲ್ಲ ಮಾದರಿಯಾಗಬೇಕು ಎಂದು ನಟಿ, ಮಾಜಿ ಸಚಿವೆ ಉಮಾಶ್ರೀ ಎಂದಿದ್ದಾರೆ.