ಬೆಂಗಳೂರು:- ಬೆಂಗಳೂರಿನಲ್ಲಿ ಇಂದು (ಡಿ.09) ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ರಾಜ್ಯದ ದಕ್ಷಿಣ ಒಳನಾಡು ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಚದುರಿದಿಂದ ವ್ಯಾಪಕವಾಗಿ ಸಾಧಾರಣ ಮಳೆ ಹಾಗೂ ಅಲ್ಲಲ್ಲಿ ಭಾರಿ ಮಳೆಯಾಗಲಿದೆ.
ಕರಾವಳಿ ಮತ್ತು ಉತ್ತರ ಒಳನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ. ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ.
ಉತ್ತರ ಒಳನಾಡಿ ಬೆಳಗಾವಿ, ಧಾರವಾಡ, ಗದಗ, ಹಾವೇರಿ ಮತ್ತು ಕೊಪ್ಪಳ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ. ಇನ್ನು ಉಳಿದಂತೆ ಬಾಗಲಕೋಟೆ, ಬೀದರ, ಕಲಬುರಗಿ, ರಾಯಚೂರು, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಒಣಹವೆ ಬೀಸಲಿದೆ ಎನ್ನಲಾಗಿದೆ.