ಚಾಮರಾಜನಗರ :- ಜಿಲ್ಲೆಯ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಓಂಕಾರ ವಲಯ ವ್ಯಾಪ್ತಿಯ ನಾಗಣಾಪುರ ಬ್ಲಾಕ್-02 ಗಸ್ತಿನಲ್ಲಿ ಆನೆ ಮೃತ ದೇಹ ಪತ್ತೆಯಾಗಿದೆ.
ಹುಣಸೆತಾಳ ಕಂಡಿ ಅರಣ್ಯ ಪ್ರದೇಶದಲ್ಲಿ ಗಂಡಾನೆಯ ಕಳೇಬರ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ಸತ್ತ ಆನೆಗೆ 40 ರಿಂದ 45 ವರ್ಷವಯಸ್ಸಾಗಿದೆ ಎನ್ನಲಾಗಿದೆ. ಸ್ವಾಭಾವಿಕವಾಗಿ ಮೃತಪಟ್ಟಿದೆ ಎಂದು ಅರಣ್ಯಾಧಿಕಾರಿಗಳು ದೃಢಪಡಿಸಿದೆ.
ಸ್ಥಳಕ್ಕೆ ಬಂಡೀಪುರ ಅರಣ್ಯ ಸಂರಕ್ಷಣಾಧಿಕಾರಿ ರಮೇಶ್ಕುಮಾರ್, ಗುಂಡ್ಲುಪೇಟೆ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಜಿ.ರವೀಂದ್ರ, ಓಂಕಾರ ವನ್ಯಜೀವಿ ವಲಯದ ವಲಯ ಅರಣ್ಯಾಧಿಕಾರಿ ಕೆ.ಪಿ.ಸತೀಶ್ ಕುಮಾರ್, ಉಪ ವಲಯ ಅರಣ್ಯಾಧಿಕಾರಿ ಅಮರ್ ಕೆ.ಪಿ, ಭೇಟಿ ನೀಡಿ ಕ್ರಮಕೈಗೊಂಡಿದ್ದಾರೆ.