ಬೆಳಗಾವಿ:- ಇಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ರಾಜ್ಯದ ಶೇ 85 ರಷ್ಟು ಶಾಲೆಗಳಲ್ಲಿ ಶೌಚಾಲಯ ಮತ್ತು ಕುಡಿಯುವ ನೀರಿನ ವ್ಯವಸ್ಥೆ ಇಲ್ಲ ಎಂಬುದು ಸರ್ಕಾರಕ್ಕೆ ತಿಳಿದಿದೆಯೇ ಎಂದು ಕಾಂಗ್ರೆಸ್ ಶಾಸಕ ಸಚಿವ ತನ್ವೀರ್ ಸೇಠ್ ಪ್ರಶ್ನಿಸಿದರು.
ಇವರ ಪ್ರಶ್ನೆಗೆ ಉತ್ತರಿಸಿದ ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಪ್ರಸ್ತುತ 23 ಶಾಲೆಗಳಲ್ಲಿ ಶೌಚಾಲಯವಿಲ್ಲ. ಉಳಿದ ಶಾಲೆಗಳಲ್ಲಿ ಶೌಚಾಲಯ ವ್ಯವಸ್ಥೆ ಕಲ್ಪಿಸಲಾಗಿದೆ. ಮುಂದಿನ ದಿನಗಳಲ್ಲಿ ಸರಕಾರಿ ಶಾಲೆಗಳಲ್ಲಿ ಗಂಡು ಮತ್ತು ಹೆಣ್ಣು ಮಕ್ಕಳಿಗೆ ಪ್ರತ್ಯೇಕ ಶೌಚಾಲಯ ನಿರ್ಮಿಸಲಾಗುವುದು. ಎಲ್ಲ ಸರ್ಕಾರಿ ಶಾಲೆಗಳಲ್ಲಿ ಕುಡಿಯುವ ನೀರಿನ ವ್ಯವಸ್ಥೆ ಇದೆ ಎಂದು ಹೇಳಿದರು.
ಸರಕಾರಿ ಶಾಲೆಗಳಲ್ಲಿ ಮಕ್ಕಳಿಗೆ ಶೌಚಾಲಯ ವ್ಯವಸ್ಥೆ ಸುಧಾರಿಸುವ ಪ್ರಯತ್ನದ ಭಾಗವಾಗಿ, ಶಾಲೆಗಳಲ್ಲಿ ಹೊಸ ಶೌಚಾಲಯಗಳ ನಿರ್ಮಾಣಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಜೆಟ್ನಲ್ಲಿ ಮಾಡಿದ ಪ್ರಸ್ತಾವನೆಯನ್ನು ಜಾರಿಗೆ ತರಲು ಡಿಸೆಂಬರ್ 1 ರಂದು ರಾಜ್ಯವು ಆದೇಶ ಹೊರಡಿಸಿದೆ ಎಂದು ಉತ್ತರಿಸಿದರು.