ದಾವಣಗೆರೆ: ಜಾರ್ಖಂಡ್ ರಾಜ್ಯಸಭಾ ಸದಸ್ಯ ಧೀರಜ್ ಸಾಹು ಅವರ ಮನೆಯಲ್ಲಿ ಹಣ ಪತ್ತೆ ಪ್ರಕರಣಕ್ಕೆ ಸಂಭಂಧಿಸಿದಂತೆ ಹೊನ್ನಾಳಿ ತಾಲೂಕು ಬಿಜೆಪಿ ಮಂಡಲದ ವತಿಯಿಂದ ಬೃಹತ್ ಪ್ರತಿಭಟನೆ ನಡೆಸಲಾಯಿತು. ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ನೇತೃತ್ವದಲ್ಲಿ ನಗರದ ಟಿ.ಬಿ.ವೃತ್ತದಿಂದ ಸಂಗೊಳ್ಳಿ ರಾಯಣ್ಣ ವೃತ್ತದ ವರೆಗೆ ಬೃಹತ್ ಪ್ರತಿಭಟನೆ ನಡೆಸಿದರು.
ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಧೀರಜ್ ಸಾಹು ಅವರ ಪ್ರತಿಕೃತಿ ದಹಿಸಿ ಆಕ್ರೋಶ ವ್ಯಕ್ತಪಡಿಸಿದರು. ಧೀರಜ್ ಸಾಹು ಅವರನ್ನು ಬಂಧಿಸುವಂತೆ ರೇಣುಕಾಚಾರ್ಯ ಆಗ್ರಹಿಸಿದ್ದಾರೆ.