ಹುಬ್ಬಳ್ಳಿ: ಪಡಿತರ ಅಕ್ಕಿಯನ್ನು ಅಕ್ರಮವಾಗಿ ಸಂಗ್ರಹಿಸುತ್ತಿದ್ದ ಗೋದಾಮಿನ ಮೇಲೆ ದಾಳಿ ಮಾಡಿದ, ಹುಬ್ಬಳ್ಳಿ -ಧಾರವಾಡ ಮಹಾನಗರ ಪೊಲೀಸ್ ಕಮಿಷನರೇಟ್ ನ ಸಿಸಿಬಿ ವಿಭಾಗದ ಪೊಲೀಸರು, ಅಂದಾಜು 4.42 ಲಕ್ಷ ರೂ ಮೌಲ್ಯದ ಪಡಿತರ ಅಕ್ಕಿ ವಶಪಡಿಸಿಕೊಂಡು, ಒಬ್ಬ ಆರೋಪಿಯನ್ನು ಬಂಧಿಸಿದ್ದಾರೆ.
ಇಲ್ಲಿನ ಅಮರಗೋಳದ ಎಪಿಎಂಸಿ ಗೋದಾಮಿನಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟು, ಕಾಳಸಂತೆಯಲ್ಲಿ ಮಾರಾಟಕ್ಕೆ ಯತ್ನಿಸಲಾಗುತ್ತಿದೆ ಎಂಬ ಖಚಿತ ಮಾಹಿತಿ ಮೇರೆಗೆ, ಸಿಸಿಬಿ ಪೊಲೀಸರು ದಾಳಿ ಮಾಡಿದ್ದು, ಗೋದಾನದಲ್ಲಿ ಸಂಗ್ರಹಿಸಿಟ್ಟಿದ್ದ ಅಂದಾಜು 4.42 ಲಕ್ಷ ರೂ ಮೌಲ್ಯದ ಸುಮಾರು 130 ಕ್ವಿಂಟಲ್ ಅಕ್ಕಿಯನ್ನು ವಶಪಡಿಸಿಕೊಳ್ಳಲಾಗಿದೆ
ಪ್ರಕರಣಕ್ಕೆ ಸಂಬಂಧಿಸಿದಂತೆ ಸಂದೀಪ ಜರತಾರಘರ ಎಂಬಾತನನ್ನು ಬಂಧಿಸಿ ನ್ಯಾಯಾಂಗ ವಶಕ್ಕೆ ನೀಡಲಾಗಿದೆ.
ನವನಗರ- ಎಪಿಎಂಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಿಸಿಬಿ ಪೊಲೀಸರ ಕಾರ್ಯವನ್ನು ಹುಬ್ಬಳ್ಳಿ- ಧಾರವಾಡ ಮಹಾನಗರ ಪೊಲೀಸ್ ಆಯುಕ್ತೆ ರೇಣುಕಾ ಸುಕುಮಾರ ಶ್ಲಾಘಿಸಿದ್ದಾರೆ.