ದಾವಣಗೆರೆ:- ಬಹುಸಂಖ್ಯಾತ ಹಿಂದೂಗಳಿಗೆ ಯಾವುದೇ ಅನುದಾನವನ್ನೂ ಕಾಂಗ್ರೆಸ್ ಸರ್ಕಾರ ನೀಡಿಲ್ಲ. ಮುಸ್ಲಿಮರಿಗೆ ಅನುದಾನ ನೀಡಬೇಕೆಂದರೆ ನಿಮ್ಮ ಆಸ್ತಿಗಳನ್ನು ಮಾರಾಟ ಮಾಡಿ ಕೊಡಿ ಎಂದು ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ತಾಕೀತು ಮಾಡಿದರು.
ದೇವಸ್ಥಾನಗಳ ಹುಂಡಿಗಳಿಗೆ ಹಿಂದೂ ಭಕ್ತರು ನೀಡುವ ಕಾಣಿಕೆ ಹಣವನ್ನು ಮುಸ್ಲಿಮರಿಗೆ ನೀಡುತ್ತೀರಾ? ಇಡೀ ರಾಜ್ಯವೇ ಬರದಿಂದ ತತ್ತರಿಸಿದೆ. ರೈತರಿಗೆ ಬೆಳೆ ಹಾನಿ ಪರಿಹಾರದ ಬಗ್ಗೆ ಚಕಾರ ಎತ್ತದ ಕಾಂಗ್ರೆಸ್ ಸರ್ಕಾರ ಹೇಳಿದಂತೆ ರೈತರ ಖಾತೆಗೆ 2 ಸಾವಿರ ರು. ಪರಿಹಾರ ಹಣ ಬಂದಿಲ್ಲ. ಒಬೊಬ್ಬ ಶಾಸಕರಿಗೂ ಕ್ಷೇತ್ರದ ಅಭಿವೃದ್ಧಿಗೆ 50 ಲಕ್ಷ ರು. ಮಾತ್ರ ಬಿಡುಗಡೆ ಮಾಡಲಾಗಿದೆ. ಬೆಳೆ ಹಾನಿಗೆ ತುತ್ತಾದ ರೈತರಿಗೆ ಈ ವರೆಗೆ ಸರ್ಕಾರ ಬೆಳೆ ಹಾನಿ ಪರಿಹಾರವನ್ನೇ ನೀಡಿಲ್ಲ ಎಂದು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು
ಕೇಸರಿ ಪೇಟ ಧರಿಸುವುದಿಲ್ಲ, ಹಣೆಗೆ ಕುಂಕುಮ ಹಚ್ಚಲು ವಿರೋಧಿಸುವ ಸಿದ್ದರಾಮಯ್ಯ, ದೇವಸ್ಥಾನದ ಹುಂಡಿ ಹಣ ಅನ್ಯ ಧರ್ಮೀಯರ ಅಭಿವೃದ್ಧಿಗೆ ಬಿಡುಗಡೆ ಮಾಡುತ್ತೀರಾ? ಬೆಳಗಾವಿ ಅಧಿವೇಶನ ನಡೆಯುತ್ತಿದೆ. ಮೊದಲು ಶಾಸಕರ ಕ್ಷೇತ್ರದ ಅಭಿವೃದ್ಧಿಗೆ ಅನುದಾನ ಬಿಡುಗಡೆ ಮಾಡಿ. ಪಂಚರಾಜ್ಯದ ಚುನಾವಣೆಯಲ್ಲಿ ಸೋತು ಹತಾಶರಾದ ಕಾಂಗ್ರೆಸ್ನವರು ಅಲ್ಪಸಂಖ್ಯಾತರ ಮನವೊಲಿಸಲು ಏನೇನೋ ಭರವಸೆ ನೀಡುತ್ತಿದ್ದಾರೆ ಎಂದು ಟೀಕಿಸಿದರು.