ತುಮಕೂರು ಜಿಲ್ಲೆಯಲ್ಲಿ ಜೆಡಿಎಸ್ ಗೆ ಶಾಕ್ ಮೇಲೆ ಶಾಕ್ ಆಗುತ್ತಿದೆ. ಕಾರ್ಯಕರ್ತರನ್ನ ಸ್ವಪಕ್ಷದಲ್ಲೇ ಉಳಿಸಿಕೊಳ್ಳಲು ಜಿಲ್ಲಾ ಜೆಡಿಎಸ್ ನಾಯಕರು ಹರಸಾಹಸ ಪಡುತ್ತಿದ್ದಾರೆ. ಜೆಡಿಎಸ್ ಭದ್ರಕೋಟೆಯಾಗಿದ್ದ ತುಮಕೂರು ಗ್ರಾಮಾಂತರ ಕ್ಷೇತ್ರದಲ್ಲಿ ಸಮರ್ಥ ನಾಯಕನಿಲ್ಲದೇ ಕಾರ್ಯಕರ್ತರು ಜೆಡಿಎಸ್ ಪಕ್ಷಕ್ಕೆ ಗುಡ್ ಬೈ ಹೇಳಿ ಕಾಂಗ್ರೆಸ್ ನತ್ತ ಮುಖ ಮಾಡುತ್ತಿದ್ದಾರೆ.
ಮಾಜಿ ಶಾಸಕ ಡಿ.ಸಿ ಗೌರಿಶಂಕರ್ ಜೆಡಿಎಸ್ ತೊರೆದು ಕಾಂಗ್ರೆಸ್ ಸೇರ್ಪಡೆ ಬೆನ್ನಲ್ಲೇ ಸಾವಿರಾರು ಜೆಡಿಎಸ್ ಕಾರ್ಯಕರ್ತರು ಕಾಂಗ್ರೆಸ್ ನತ್ತ ಮುಖ ಮಾಡಿದ್ದಾರೆ. ದಿನದಿಂದ ದಿನಕ್ಕೆ ಜೆಡಿಎಸ್ ಕಾರ್ಯಕರ್ತರು ಪಕ್ಷ ತೊರೆಯುತ್ತಿರುವ ಹಿನ್ನೆಲೆ ಜಿಲ್ಲಾ ಜೆಡಿಎಸ್ ನಾಯಕರಿಗೆ ತಲೆನೋವು ಶುರುವಾಗಿದೆ. ಕಾರ್ಯಕರ್ತರನ್ನ ಒಗ್ಗೂಡಿಸುವಲ್ಲಿ ಜಿಲ್ಲಾ ಜೆಡಿಎಸ್ ನಾಯಕರು ವಿಫಲವಾಗಿದ್ದು, ತುಮಕೂರು ಗ್ರಾಮಾಂತರ ಜೆಡಿಎಸ್ ಸಭೆಗೆ ಬಾರದೆ ನಿರಾಸೆ ತೋರಿಸಿದ ಕಾರ್ಯಕರ್ತರು..