ಬೆಂಗಳೂರು: ಸ್ವಚ್ಛ ಭಾರತ ಅಭಿಯಾನ ಅನುಷ್ಠಾನಕ್ಕಾಗಿ 2,912 ಕೋಟಿ ರು. ಅನುದಾನ ಮೀಸಲಿಡಲಾಗಿದೆ ಎಂದು ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ಹೇಳಿದ್ದಾರೆ. ಬಿಜೆಪಿ ಸದಸ್ಯ ಜ್ಯೋತಿ ಗಣೇಶ್ ಪ್ರಶ್ನೆಗೆ ಉತ್ತರಿಸಿದ ಅವರು, ಸ್ವಚ್ಛ ಭಾರತ ಅಭಿಯಾನದ ಮೊದಲ ಹಂತದಲ್ಲಿ 854 ಕೋಟಿ ರು., ಎರಡನೇ ಹಂತದಲ್ಲಿ 2,058 ಕೋಟಿ ರು. ಅನುದಾನ ಒದಗಿಸಲಾಗಿದೆ. 92 ಹೊಸ ನಗರ ಸ್ಥಳೀಯ ಸಂಸ್ಥೆಗಳನ್ನು ರಚಿಸಲಾಗಿದ್ದು,
ಬೆಂಗಳೂರು: ಡೆಂಗ್ಯೂ ಆರ್ಭಟ, ಕಳೆದ 1 ತಿಂಗಳಲ್ಲಿ ದಾಖಲೆ ಮಟ್ಟದ ಕೇಸ್ ಪತ್ತೆ
ನಗರ ಭಾಗದಲ್ಲಿನ ತ್ಯಾಜ್ಯವನ್ನು ವ್ಯವಸ್ಥಿತವಾಗಿ ನಿರ್ವಹಣೆ ಮಾಡಲು ಮೆಟೀರಿಯಲ್ ರಿಕವರಿ ಸ್ಪೆಷಾಲಿಟಿ ಸೌಲಭ್ಯವನ್ನು ಅಭಿವೃದ್ಧಿಪಡಿಸಲಾಗಿದೆ ಎಂದು ಹೇಳಿದರು. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳಿಂದ ಲಭ್ಯವಿರುವ ಅನುದಾನವನ್ನು ಸದ್ಬಳಕೆ ಮಾಡಿಕೊಂಡು ಎಲ್ಲಾ ಮಹಾನಗರ ಪಾಲಿಕೆಗಳಲ್ಲಿ ತ್ಯಾಜ್ಯವನ್ನು ವೈಜ್ಞಾನಿಕವಾಗಿ ವಿಲೇವಾರಿ ಮಾಡಲಾಗುವುದು. ಸ್ವಚ್ಛ ಭಾರತ ಅಭಿಯಾನದ ಅನುಷ್ಠಾನಕ್ಕಾಗಿಯೇ ಪ್ರತ್ಯೇಕ ಐಎಎಸ್ ಅಧಿಕಾರಿ ನಿಯೋಜಿಸಲಾಗಿದೆ ಎಂದರು.