ದೇವನಹಳ್ಳಿ:– ಬೆಂ. ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಸೂಲಿಬೆಲೆಯಲ್ಲಿ ಮನೆಯಲ್ಲಿದ್ದ ವೃದ್ಧ ದಂಪತಿಯನ್ನು ರಾಡ್ನಿಂದ ಹೊಡೆದು ಕೊಲೆ ಮಾಡಿರುವ ಘಟನೆ ಜರುಗಿದೆ
ಆಸ್ತಿ ವಿಚಾರಕ್ಕೆ ಮಗನೇ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ರಾಮಕೃಷ್ಣಪ್ಪ (70) ಮತ್ತು ಮುನಿರಾಮಕ್ಕ (65) ಕೊಲೆಯಾದ ದಂಪತಿ. ರಾಡ್ನಿಂದ ಹೊಡೆದು ತಂದೆ-ತಾಯಿಯನ್ನು ಕೊಲೆ ಮಾಡಿದ ಆರೋಪ ಕೇಳಿಬಂದಿದ್ದರಿಂದ ಮಗ ನರಸಿಂಹನನ್ನು ಸೂಲಿಬೆಲೆ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ಮದುವೆಯಾದ ಬಳಿಕ ತಂದೆ-ತಾಯಿ ಬಿಟ್ಟು ಪ್ರತ್ಯೇಕವಾಗಿ ಮಗ ವಾಸವಾಗಿದ್ದ. ಒಬ್ಬನೇ ಮಗನಾಗಿದ್ದರೂ ತಂದೆ ತಾಯಿಯನ್ನು ಹೊರಗಿಟ್ಟಿದ್ದ. ವೃದ್ಧ ದಂಪತಿ ಹೆಣ್ಣು ಮಕ್ಕಳಿಗೆ ಆಸ್ತಿ ಕೊಡಲು ಮುಂದಾಗಿದ್ದಕ್ಕೆ ಕೊಲೆ ಮಾಡಿರುವ ಆರೋಪ ಕೇಳಿಬಂದಿದೆ.