ರಾಯಚೂರು: ಹಾಸ್ಟೆಲ್ನಲ್ಲಿ ಊಟ ಸೇವಿಸಿದ ಬಳಿಕ 15 ವಿದ್ಯಾರ್ಥಿನಿಯರು ಅಸ್ವಸ್ಥಗೊಂಡಿರುವ ಘಟನೆ ಜಿಲ್ಲೆಯ ಮಾನ್ವಿ ಪಟ್ಟಣದಲ್ಲಿ ಭಾನುವಾರ ನಡೆದಿದೆ.
ಮೆಟ್ರಿಕ್ ಪೂರ್ವ ವಿದ್ಯಾರ್ಥಿನಿಯರ ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥಗೊಂಡಿದ್ದು ಅವರನ್ನು ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ.
ಮಧ್ಯಾಹ್ನ ಪಲಾವ್ ಸೇವಿಸಿದ್ದ ವಿದ್ಯಾರ್ಥಿನಿಯರಿಗೆ ಸಂಜೆ ಏಕಾಏಕಿ ವಾಂತಿ-ಭೇದಿ ಕಾಣಿಸಿಕೊಂಡಿದೆ. ಹೀಗಾಗಿ ಅಸ್ವಸ್ಥಗೊಂಡ 15 ವಿದ್ಯಾರ್ಥಿಯರನ್ನು ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. ಪರಿಸ್ಥಿತಿ ಗಂಭೀರವಾಗಿದ್ದ ಒಬ್ಬಳು ವಿದ್ಯಾರ್ಥಿಯನ್ನು ರಾಯಚೂರಿನ ರಿಮ್ಸ್ಗೆ ರವಾನಿಸಲಾಗಿದೆ
ಘಟನೆ ನಡೆದ ಬಳಿಕ ಹಾಸ್ಟೆಲ್ಗೆ ಬಾರದ ವಾರ್ಡನ್ ಪಾರ್ವತಿ ವಿರುದ್ಧ ವಿದ್ಯಾರ್ಥಿನಿಯರು ಹಾಗೂ ಪಾಲಕರು ಆಕ್ರೋಶ ಹೊರಹಾಕಿದ್ದಾರೆ.