ಕೋಲಾರ :- ಜಿಲ್ಲೆಯ ಗಡಿ ಗ್ರಾಮಗಳ ಜನರಿಗೆ 60 ಕ್ಕೂ ಹೆಚ್ಚು ಕಾಡಾನೆಗಳ ಆತಂಕ ಹೆಚ್ಚಾಗಿದೆ. ಇದಕ್ಕೆ ಕಾರಣ, ತಮಿಳುನಾಡಿನ ಹೊಸೂರು ಅರಣ್ಯದಿಂದ 60ಕ್ಕೂ ಹೆಚ್ಚು ಕಾಡಾನೆಗಳು ಬಂಗಾರಪೇಟೆ ತಾಲೂಕಿನ ಕಾಮಸಮುದ್ರ ಅರಣ್ಯ ಪ್ರದೇಶದತ್ತ ಮುಖ ಮಾಡಿವೆ.
ಈಗ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಹಾಗಿದೆ. ಹೀಗಾಗಿ ಜನರು ಮನೆಯಿಂದ ಹೊರ ಬಾರದಂತೆ ಅರಣ್ಯ ಇಲಾಖೆ ಸಿಬ್ಬಂದಿ ಸೂಚನೆ ನೀಡಿದ್ದಾರೆ.
ರಾತ್ರಿ ವೇಳೆಯಲ್ಲಿ ಜನರು ಮನೆಯಿಂದ ಹೊರ ಬಾರದಂತೆ ಕಾಮಸಮುದ್ರ ಪೊಲೀಸರು, ಅರಣ್ಯ ಸಿಬ್ಬಂದಿ ಮೈಕ್ ಮೂಲಕ ಸೂಚನೆ ನೀಡಿದ್ದಾರೆ